Matthew 8:17 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ಆತನು ನಮ್ಮ ಬೇನೆಗಳನ್ನು ತೆಗೆದುಕೊಂಡನು, ನಮ್ಮ ರೋಗಗಳನ್ನು ಹೊತ್ತುಕೊಂಡನು” \rq ಯೆಶಾಯ 53:4\rq*
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇದರಿಂದ “ನಮ್ಮ ಬೇನೆಗಳನ್ನು ತಾನೇ ತೆಗೆದುಕೊಂಡು ನಮ್ಮ ರೋಗಗಳನ್ನು ಹೊತ್ತುಕೊಂಡನು” ಎಂದು ಯೆಶಾಯನೆಂಬ ಪ್ರವಾದಿ ನುಡಿದಂತಹ ಮಾತು ಹೀಗೆ ನೆರವೇರಿತು.
Kannada BSI Bible 2016
ಹೀಗೆ--ಆತನು ತಾನೇ ನಮ್ಮ ಬಲಹೀನತೆಗಳನ್ನು ತಕ್ಕೊಂಡು ರೋಗಗಳನ್ನು ಹೊತ್ತನು ಎಂಬದಾಗಿ ಪ್ರವಾದಿಯಾದ ಯೆಶಾಯನಿಂದ ಹೇಳಲ್ಪಟ್ಟದ್ದು ನೆರವೇರುವಂತೆ ಇದಾಯಿತು.
Kannada BSI JV (ಕನ್ನಡ ಸತ್ಯವೇದವು J.V. (BSI))
ಇದರಿಂದ ನಮ್ಮ ಬೇನೆಗಳನ್ನು ತಾನೇ ತೆಗೆದುಕೊಂಡು ನಮ್ಮ ರೋಗಗಳನ್ನು ಹೊತ್ತುಕೊಂಡನು ಎಂದು ಯೆಶಾಯನೆಂಬ ಪ್ರವಾದಿಯಿಂದ ಹೇಳಿರುವ ಮಾತು ನೆರವೇರಿತು.
Kannada Bible (KNCL) BSI 2016
ಹೀಗೆ, “ನಮ್ಮ ದುರ್ಬಲತೆಗಳನ್ನು ವಹಿಸಿಕೊಂಡನು; ನಮ್ಮ ರೋಗರುಜಿನಗಳನ್ನು ಆತನೇ ಪರಿಹರಿಸಿದನು,” ಎಂಬ ಯೆಶಾಯನ ಪ್ರವಾದನೆ ಈಡೇರಿತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಹೀಗೆ, “ಅವರು ತಾವೇ ನಮ್ಮ ಬಲಹೀನತೆಗಳನ್ನು ತೆಗೆದುಕೊಂಡು, ನಮ್ಮ ರೋಗಗಳನ್ನು ಹೊತ್ತುಕೊಂಡರು,” ಎಂದು ಯೆಶಾಯ ಪ್ರವಾದಿಯು ಹೇಳಿದ್ದು ನೆರವೇರಿತು.