Matthew 8:24 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ದೋಣಿಯು ದಡವನ್ನು ಬಿಟ್ಟಮೇಲೆ ದೊಡ್ಡ ಬಿರುಗಾಳಿಯು ಸರೋವರದ ಮೇಲೆ ಪ್ರಾರಂಭವಾಯಿತು. ಅಲೆಗಳು ದೋಣಿಯನ್ನು ಮುಚ್ಚಿಕೊಂಡವು. ಆದರೆ ಯೇಸು ನಿದ್ರಿಸುತ್ತಿದ್ದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವರು ಹೋಗುತ್ತಿರುವಾಗ ಸಮುದ್ರವು ಅಲ್ಲೋಲಕಲ್ಲೋಲವಾಗಿ ದೋಣಿಯು ಅಲೆಗಳಿಂದ ಮುಚ್ಚುವಂತೆ ಆಯಿತು; ಆದರೆ ಯೇಸು ನಿದ್ರಿಸುತ್ತಿದ್ದನು.
Kannada BSI Bible 2016
ಆಗ ಇಗೋ, ಸಮುದ್ರದಲ್ಲಿ ದೊಡ್ಡ ತುಫಾನು ಎದ್ದ ಕಾರಣ ದೋಣಿಯು ತೆರೆಗಳಿಂದ ಮುಚ್ಚಲ್ಪಟ್ಟಿತು; ಆದರೆ ಆತನು ನಿದ್ರಿಸುತ್ತಿದ್ದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವರು ಹೋಗುತ್ತಿರುವಾಗ ಸಮುದ್ರವು ಅಲ್ಲಕಲ್ಲೋಲವಾಗಿ ದೋಣಿಯು ತೆರೆಗಳಿಂದ ಮುಚ್ಚಿಹೋಯಿತು; ಆದರೆ ಆತನು ನಿದ್ದೆ ಹತ್ತಿ ಮಲಗಿದ್ದನು.
Kannada Bible (KNCL) BSI 2016
ಇದ್ದಕ್ಕಿದ್ದ ಹಾಗೆ ಸರೋವರದಲ್ಲಿ ರಭಸವಾದ ಬಿರುಗಾಳಿ ಎದ್ದಿತು. ದೋಣಿ ಅಲೆಗಳಿಂದ ಮುಳುಗಿಹೋಗುವುದರಲ್ಲಿತ್ತು. ಯೇಸುವಾದರೋ ನಿದ್ರಾವಶರಾಗಿದ್ದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇದ್ದಕ್ಕಿದ್ದ ಹಾಗೆ, ಸರೋವರದಲ್ಲಿ ದೊಡ್ಡ ಬಿರುಗಾಳಿ ಎದ್ದ ಕಾರಣ ದೋಣಿಯು ಅಲೆಗಳಿಂದ ಮುಚ್ಚುತ್ತಿತ್ತು. ಆದರೆ ಯೇಸು ನಿದ್ರಿಸುತ್ತಿದ್ದರು.