Matthew 8:27 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಜನರೆಲ್ಲರೂ ಆಶ್ಚರ್ಯಪಟ್ಟರು. “ಈತನು ಎಂತಹ ಮನುಷ್ಯ? ಬಿರುಗಾಳಿ ಮತ್ತು ನೀರು ಈತನಿಗೆ ವಿಧೇಯವಾಗುತ್ತವೆಯಲ್ಲಾ” ಎಂದು ಮಾತಾಡಿಕೊಂಡರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆ ಜನರು ಬೆರಗಾಗಿ, “ಈತನು ಎಂಥವನಾಗಿರಬಹುದು! ಗಾಳಿಯೂ ಸಮುದ್ರವೂ ಸಹ ಈತನಿಗೆ ವಿಧೇಯವಾಗುತ್ತವಲ್ಲಾ” ಅಂದರು.
Kannada BSI Bible 2016
ಆದರೆ ಅವರು ಆಶ್ಚರ್ಯದಿಂದ--ಈತನು ಎಂಥಾ ಮನುಷ್ಯ ನಾಗಿರಬಹುದು! ಗಾಳಿಯೂ ಸಮುದ್ರವೂ ಈತನಿಗೆ ವಿಧೇಯವಾಗುತ್ತವಲ್ಲಾ ಅಂದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆ ಜನರು ಬೆರಗಾಗಿ - ಈತನು ಎಂಥವನಾಗಿರಬಹುದು! ಗಾಳಿಯೂ ಸಮುದ್ರವೂ ಸಹ ಈತನು ಹೇಳಿದ ಹಾಗೆ ಕೇಳುತ್ತವಲ್ಲಾ ಅಂದರು.
Kannada Bible (KNCL) BSI 2016
ಆಗ ವಾತಾವರಣ ಪ್ರಶಾಂತವಾಯಿತು. ಶಿಷ್ಯರು ನಿಬ್ಬೆರಗಾದರು. “ಗಾಳಿಯೂ ಸರೋವರವೂ ಇವರು ಹೇಳಿದ್ದಂತೆ ಕೇಳಬೇಕಾದರೆ ಇವರೆಂತಹ ವ್ಯಕ್ತಿಯಾಗಿರಬೇಕು!” ಎಂದುಕೊಂಡರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ ಶಿಷ್ಯರು ಆಶ್ಚರ್ಯದಿಂದ, “ಇವರು ಎಂಥಾ ಮನುಷ್ಯನಾಗಿರಬಹುದು? ಗಾಳಿಯೂ ಸರೋವರವೂ ಸಹ ಇವರ ಮಾತುಗಳನ್ನು ಕೇಳುತ್ತವಲ್ಲಾ!” ಎಂದರು.