Matthew 8:28 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯೇಸು ಸರೋವರದ ಮತ್ತೊಂದು ತೀರದಲ್ಲಿದ್ದ ಗದರೇನ ಪ್ರಾಂತ್ಯಕ್ಕೆ ಬಂದನು. ಅಲ್ಲಿ ದೆವ್ವಗಳಿಂದ ಪೀಡಿತರಾಗಿದ್ದ ಇಬ್ಬರು ಯೇಸುವಿನ ಬಳಿಗೆ ಬಂದರು. ಅವರು ಸಮಾಧಿಯ ಗವಿಗಳಲ್ಲಿ ವಾಸವಾಗಿದ್ದರು ಮತ್ತು ಬಹಳ ಅಪಾಯಕಾರಿಗಳಾಗಿದ್ದರು. ಆದ್ದರಿಂದ ಜನರು ಆ ಮಾರ್ಗದಲ್ಲಿ ಹೋಗುತ್ತಿರಲಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಮೇಲೆ ಆತನು ಆಚೇದಡಕ್ಕೆ ಗದರೇನರ ಸೀಮೆಗೆ ಬಂದಾಗ ದೆವ್ವಹಿಡಿದವರಿಬ್ಬರು ಸಮಾಧಿಯ ಗವಿಗಳೊಳಗಿಂದ ಹೊರಟು ಆತನೆದುರಿಗೆ ಬಂದರು. ಅವರು ಮಹಾಕ್ರೂರಿಗಳಾಗಿದ್ದುದರಿಂದ ಆ ದಾರಿಯಲ್ಲಿ ಯಾರೂ ತಿರುಗಾಡುತ್ತಿರಲಿಲ್ಲ.
Kannada BSI Bible 2016
ಆತನು ಆಚೆಯ ದಡದ ಗದರೇನರ ದೇಶಕ್ಕೆ ಬಂದಾಗ ದೆವ್ವಗಳು ಹಿಡಿದಿದ್ದ ಇಬ್ಬರು ಸಮಾಧಿ ಗಳೊಳಗಿಂದ ಆತನ ಎದುರಿಗೆ ಬಂದರು. ಅವರು ಬಹು ಉಗ್ರತೆಯುಳ್ಳವರಾಗಿದ್ದದರಿಂದ ಯಾವ ಮನು ಷ್ಯನೂ ಆ ಮಾರ್ಗವಾಗಿ ಹೋಗುವ ಹಾಗಿದ್ದಿಲ್ಲ.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಮೇಲೆ ಆತನು ಆಚೇದಡಕ್ಕೆ ಗದರೇನರ ಸೀಮೆಗೆ ಮುಟ್ಟಿದಾಗ ದೆವ್ವಹಿಡಿದವರಿಬ್ಬರು ಸಮಾಧಿಯ ಗವಿಗಳೊಳಗಿಂದ ಹೊರಟು ಆತನೆದುರಿಗೆ ಬಂದರು. ಅವರು ಬಹು ಉಗ್ರರಾಗಿದ್ದದರಿಂದ ಆ ದಾರಿಯಲ್ಲಿ ಯಾರೂ ತಿರುಗಾಡಲಾರದೆ ಇದ್ದರು.
Kannada Bible (KNCL) BSI 2016
ಯೇಸುಸ್ವಾಮಿ ಗಲಿಲೇಯ ಸರೋವರವನ್ನು ದಾಟಿ, ಆಚೆಯ ಕಡೆಯಿದ್ದ ಗದರೇನ ಎಂಬ ಪ್ರಾಂತ್ಯಕ್ಕೆ ಬಂದರು. ದೆವ್ವ ಹಿಡಿದಿದ್ದ ಇಬ್ಬರು ಸಮಾಧಿಯ ಗುಹೆಗಳಿಂದ ಹೊರಬಂದು ಅವರಿಗೆ ಎದುರಾದರು. ಅವರಿಬ್ಬರೂ ಮಹಾಕ್ರೂರಿಗಳು. ಈ ಕಾರಣ ಯಾರೂ ಆ ಮಾರ್ಗವಾಗಿ ಹೋಗಲಾಗುತ್ತಿರಲಿಲ್ಲ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೇಸು ಆಚೆಯ ಕಡೆಯಲ್ಲಿದ್ದ ಗದರೇನರ ಪ್ರಾಂತಕ್ಕೆ ಬಂದಾಗ, ದೆವ್ವ ಹಿಡಿದಿದ್ದ ಇಬ್ಬರು ಸಮಾಧಿಯ ಗುಹೆಗಳಿಂದ ಬಂದು ಯೇಸುವಿಗೆ ಎದುರಾದರು. ಅವರು ಬಹು ಕ್ರೂರಿಗಳಾಗಿದ್ದುದರಿಂದ ಯಾರೂ ಆ ಮಾರ್ಗವಾಗಿ ಹೋಗಲಾಗುತ್ತಿರಲಿಲ್ಲ.