Matthew 8:3 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯೇಸು ಅವನನ್ನು ಮುಟ್ಟಿ, “ನಿನ್ನನ್ನು ಗುಣಪಡಿಸಲು ನನಗೆ ಮನಸ್ಸಿದೆ, ಗುಣವಾಗು” ಎಂದನು. ಆ ಕ್ಷಣವೇ ಅವನ ಕುಷ್ಠರೋಗ ವಾಸಿಯಾಯಿತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆತನು ಕೈಚಾಚಿ ಆತನನ್ನು ಮುಟ್ಟಿ, “ನನಗೆ ಮನಸ್ಸುಂಟು; ಶುದ್ಧನಾಗು” ಅಂದನು. ಕೂಡಲೆ ಅವನು ಕುಷ್ಠದಿಂದ ಶುದ್ಧನಾದನು.
Kannada BSI Bible 2016
ಆಗ ಯೇಸು ತನ್ನ ಕೈಯನ್ನು ಚಾಚಿ ಅವನನ್ನು ಮುಟ್ಟಿ--ನನಗೆ ಮನಸ್ಸುಂಟು; ನೀನು ಶುದ್ಧನಾಗು ಅಂದನು. ತಕ್ಷಣವೇ ಅವನ ಕುಷ್ಠವು ಹೋಗಿ ಅವನು ಶುದ್ಧನಾದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆತನು ಕೈನೀಡಿ ಅವನನ್ನು ಮುಟ್ಟಿ - ನನಗೆ ಮನಸ್ಸುಂಟು; ಶುದ್ಧವಾಗು ಅಂದನು. ಕೂಡಲೆ ಅವನ ಕುಷ್ಠವು ವಾಸಿಯಾಯಿತು.
Kannada Bible (KNCL) BSI 2016
ಯೇಸು ಕೈಚಾಚಿ ಅವನನ್ನು ಮುಟ್ಟಿ, “ಖಂಡಿತವಾಗಿಯೂ ನನಗೆ ಮನಸ್ಸಿದೆ, ಗುಣಹೊಂದು,” ಎಂದರು. ತಕ್ಷಣವೇ ಅವನ ಕುಷ್ಠವು ಮಾಯವಾಯಿತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಯೇಸು ಕೈಚಾಚಿ ಅವನನ್ನು ಮುಟ್ಟಿ, “ನನಗೆ ಮನಸ್ಸಿದೆ, ನೀನು ಶುದ್ಧನಾಗು,” ಎಂದರು. ತಕ್ಷಣವೇ ಅವನ ಕುಷ್ಠವು ಹೋಗಿ ಅವನು ಶುದ್ಧನಾದನು.