Matthew 8:32 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯೇಸು ಅವುಗಳಿಗೆ, “ಹೋಗಿ” ಅಂದನು. ಆಗ ಆ ದೆವ್ವಗಳು ಅವರಿಬ್ಬರನ್ನು ಬಿಟ್ಟು ಹಂದಿಗಳೊಳಗೆ ಹೋದವು. ಕೂಡಲೇ ಹಂದಿಗಳೆಲ್ಲಾ ಗುಡ್ಡದ ಕೆಳಗೆ ಓಡಿ ಸರೋವರದಲ್ಲಿ ಬಿದ್ದು ನೀರಿನಲ್ಲಿ ಮುಳುಗಿಹೋದವು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆತನು ಅವುಗಳಿಗೆ, “ಹೋಗಿರಿ” ಅನ್ನಲು ಅವು ಹೊರಗೆ ಬಂದು ಹಂದಿಗಳೊಳಗೆ ಹೊಕ್ಕವು; ಅ ಕ್ಷಣವೇ ಆ ಗುಂಪೆಲ್ಲಾ ಓಡಿ ಕಡಿದಾದ ಸ್ಥಳದಿಂದ ಸಮುದ್ರದೊಳಗೆ ಬಿದ್ದು ನೀರಿನಲ್ಲಿ ಮುಳುಗಿ ಸತ್ತು ಹೋದವು.
Kannada BSI Bible 2016
ಆತನು ಅವುಗಳಿಗೆ--ಹೋಗಿರಿ ಅಂದನು. ಆಗ ಅವು ಹೊರಗೆ ಬಂದು ಹಂದಿಗಳ ಗುಂಪಿನೊಳಗೆ ಸೇರಿಕೊಂಡವು; ಆಗ ಇಗೋ, ಹಂದಿಗಳ ಗುಂಪೆಲ್ಲಾ ಸಮುದ್ರದ ಕಡಿದಾದ ಸ್ಥಳಕ್ಕೆ ಉಗ್ರವಾಗಿ ಓಡಿಹೋಗಿ ನೀರಿನಲ್ಲಿ ಬಿದ್ದು ಸತ್ತು ಹೋದವು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆತನು - ಹೋಗಿರಿ ಅನ್ನಲು ಅವು ಹೊರಗೆ ಬಂದು ಹಂದಿಗಳೊಳಗೆ ಹೊಕ್ಕವು; ಆ ಕ್ಷಣವೇ ಆ ಗುಂಪೆಲ್ಲಾ ಓಡಿ ಕಡಿದಾದ ಸ್ಥಳದಿಂದ ಸಮುದ್ರದೊಳಗೆ ಬಿದ್ದು ನೀರಿನಲ್ಲಿ ಮುಣುಗಿ ಸತ್ತುಹೋಯಿತು.
Kannada Bible (KNCL) BSI 2016
ಯೇಸು, “ಹೋಗಿ” ಎಂದು ಅಪ್ಪಣೆಯಿತ್ತರು. ದೆವ್ವಗಳು ಹೊರಗೆ ಬಂದು ಹಂದಿಗಳ ಹಿಂಡನ್ನು ಹೊಕ್ಕವು. ಆ ಕ್ಷಣವೇ ಆ ಹಿಂಡೆಲ್ಲಾ ಬೆಟ್ಟದ ಕಡಿದಾದ ಬದಿಯಿಂದ ಧಾವಿಸಿ, ಸರೋವರಕ್ಕೆ ಬಿದ್ದು, ನೀರುಪಾಲಾಗಿಹೋಯಿತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೇಸು ಅವುಗಳಿಗೆ, “ಹೋಗಿರಿ,” ಎಂದರು. ಆಗ ಅವು ಹೊರಗೆ ಬಂದು ಹಂದಿಗಳ ಹಿಂಡನ್ನು ಹೊಕ್ಕವು. ಆಗ ಆ ಹಿಂಡೆಲ್ಲಾ ಕಡಿದಾದ ಬದಿಯಿಂದ ಓಡಿಹೋಗಿ ಸರೋವರದೊಳಗೆ ಬಿದ್ದು ಸತ್ತು ಹೋದವು.