Matthew 8:34 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆಗ ಪಟ್ಟಣದ ಜನರೆಲ್ಲರೂ ಯೇಸುವನ್ನು ನೋಡಲು ಹೋಗಿ, ತಮ್ಮ ಸ್ಥಳವನ್ನು ಬಿಟ್ಟುಹೋಗಬೇಕೆಂದು ಆತನನ್ನು ಬೇಡಿಕೊಂಡರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ಊರಿನವರೆಲ್ಲರೂ ಯೇಸುವನ್ನು ಸಂಧಿಸಲು ಹೊರಟುಬಂದು ಆತನನ್ನು ಕಂಡು ತಮ್ಮ ಸೀಮೆಯನ್ನು ಬಿಟ್ಟು ಹೋಗಬೇಕೆಂದು ಬೇಡಿಕೊಂಡರು.
Kannada BSI Bible 2016
ಆಗ ಇಗೋ, ಪಟ್ಟಣದವರೆಲ್ಲರು ಯೇಸುವನ್ನು ಸಂಧಿಸುವದಕ್ಕೆ ಹೊರಗೆ ಬಂದರು; ಮತ್ತು ಅವರು ಆತನನ್ನು ನೋಡಿ ತಮ್ಮ ಮೇರೆಗಳನ್ನು ಬಿಟ್ಟು ಹೋಗಬೇಕೆಂದು ಬೇಡಿಕೊಂಡರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಊರಿನವರೆಲ್ಲರೂ ಯೇಸುವಿನೆದುರಿಗೆ ಹೊರಟುಬಂದು ಆತನನ್ನು ಕಂಡು ತಮ್ಮ ಸೀಮೆಯನ್ನು ಬಿಟ್ಟುಹೋಗಬೇಕೆಂದು ಬೇಡಿಕೊಂಡರು.
Kannada Bible (KNCL) BSI 2016
ಆಗ ಊರಿಗೆ ಊರೇ ಯೇಸುವನ್ನು ನೋಡಲು ಬಂದಿತು. ಅವರನ್ನು ಕಂಡು ತಮ್ಮ ಆಸುಪಾಸನ್ನು ಬಿಟ್ಟುಹೋಗಬೇಕೆಂದು ಮನವಿಮಾಡಿಕೊಂಡಿತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಪಟ್ಟಣದವರೆಲ್ಲರೂ ಯೇಸುವನ್ನು ಕಾಣುವುದಕ್ಕೆ ಹೊರಗೆ ಬಂದರು. ಅವರು ಯೇಸುವನ್ನು ಕಂಡು, ತಮ್ಮ ಪ್ರಾಂತವನ್ನು ಬಿಟ್ಟುಹೋಗಬೇಕೆಂದು ಬೇಡಿಕೊಂಡರು.