Matthew 8:4 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯೇಸು ಅವನಿಗೆ, “ಇದು ಹೇಗಾಯಿತೆಂಬುದನ್ನು ಯಾರಿಗೂ ಹೇಳಬೇಡ. ಈಗ ನೀನು ಹೋಗಿ ಯಾಜಕನಿಗೆ ನಿನ್ನ ಮೈಯನ್ನು ತೋರಿಸು. ಗುಣಹೊಂದಿದವರು ಮೋಶೆಯ ಆಜ್ಞೆಗನುಸಾರವಾಗಿ ಕೊಡತಕ್ಕ ಕಾಣಿಕೆಯನ್ನು ಅರ್ಪಿಸು. ನೀನು ಗುಣವಾದದ್ದಕ್ಕೆ ಅದು ಸಾಕ್ಷಿಯಾಗಿರುವುದು” ಎಂದು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ಯೇಸು ಅವನಿಗೆ; “ನೋಡು, ಯಾರಿಗೂ ಹೇಳಬೇಡ; ಆದರೆ ಹೋಗಿ ಯಾಜಕನಿಗೆ ನಿನ್ನ ಮೈ ತೋರಿಸಿ ಮೋಶೆ ನೇಮಿಸಿದ ಕಾಣಿಕೆಯನ್ನು ಕೊಡು;” ಅದು ಅವರಿಗೆ ಸಾಕ್ಷಿಯಾಗಲಿ ಎಂದು ಹೇಳಿದನು.
Kannada BSI Bible 2016
ಯೇಸು ಅವನಿಗೆ--ನೀನು ಯಾರಿಗೂ ಹೇಳಬೇಡ ನೋಡು; ಹೊರಟುಹೋಗಿ ಯಾಜಕನಿಗೆ ನಿನ್ನನ್ನು ತೋರಿಸಿಕೊಂಡು ಅವರಿಗೆ ಸಾಕ್ಷಿಯಾಗಿರುವಂತೆ ಮೋಶೆಯು ಆಜ್ಞಾಪಿಸಿದ ಕಾಣಿಕೆಯನ್ನು ಅರ್ಪಿಸು ಎಂದು ಹೇಳಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಗ ಯೇಸು ಅವನಿಗೆ - ಯಾರಿಗೂ ಹೇಳಬೇಡ ನೋಡು; ಆದರೆ ಹೋಗಿ ಯಾಜಕನಿಗೆ ನಿನ್ನ ಮೈ ತೋರಿಸಿ ಮೋಶೆ ನೇವಿುಸಿದ ಕಾಣಿಕೆಯನ್ನು ಕೊಡು; ಅದು ಜನರಿಗೆ ಸಾಕ್ಷಿಯಾಗಲಿ ಎಂದು ಹೇಳಿದನು.
Kannada Bible (KNCL) BSI 2016
ಯೇಸು ಅವನಿಗೆ, “ಎಚ್ಚರಿಕೆ, ನೀನು ಗುಣಹೊಂದಿರುವುದನ್ನು ಯಾರಿಗೂ ಹೇಳಕೂಡದು. ಆದರೆ ನೆಟ್ಟಗೆ ಯಾಜಕನ ಬಳಿಗೆ ಹೋಗು; ಅವನು ನಿನ್ನನ್ನು ಪರೀಕ್ಷಿಸಿನೋಡಲಿ. ಅನಂತರ ಮೋಶೆ ನಿಯಮಿಸಿರುವ ಪ್ರಕಾರ ಶುದ್ಧೀಕರಣವಿಧಿಯನ್ನು ಅನುಸರಿಸು. ಇದು ಜನರಿಗೆ ಸಾಕ್ಷಿಯಾಗಿರಲಿ,” ಎಂದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಯೇಸು ಅವನಿಗೆ, “ನೋಡು ಇದನ್ನು ನೀನು ಯಾರಿಗೂ ಹೇಳಬೇಡ, ಹೋಗಿ ಯಾಜಕನಿಗೆ ನಿನ್ನನ್ನು ತೋರಿಸಿಕೊಂಡು ಜನರಿಗೆ ಸಾಕ್ಷಿಯಾಗಿರುವಂತೆ ಮೋಶೆಯು ಆಜ್ಞಾಪಿಸಿದ ಕಾಣಿಕೆಯನ್ನು ಅರ್ಪಿಸು,” ಎಂದು ಹೇಳಿದರು.