Matthew 8:9 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನಾನು ಸಹ ಬೇರೆ ಅಧಿಕಾರಿಗಳ ಅಧೀನದಲ್ಲಿದ್ದೇನೆ. ನನ್ನ ಅಧೀನದಲ್ಲಿ ಸಿಪಾಯಿಗಳಿದ್ದಾರೆ. ನಾನು ಒಬ್ಬ ಸಿಪಾಯಿಗೆ ‘ಹೋಗು’ ಅಂದರೆ ಅವನು ಹೋಗುತ್ತಾನೆ; ಮತ್ತೊಬ್ಬ ಸಿಪಾಯಿಗೆ ‘ಬಾ’ ಅಂದರೆ ಅವನು ಬರುತ್ತಾನೆ. ನಾನು ನನ್ನ ಸೇವಕನಿಗೆ, ‘ಇದನ್ನು ಮಾಡು’ ಅಂದರೆ ಅವನು ವಿಧೇಯತೆಯಿಂದ ಮಾಡುತ್ತಾನೆ. ನಿನಗೂ ಇದೇ ರೀತಿಯ ಅಧಿಕಾರವಿದೆ ಎಂದು ನನಗೆ ಗೊತ್ತಿದೆ” ಎಂದು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಾನು ಸಹ ಅಧಿಕಾರದ ಕೆಳಗಿರುವ ಮನುಷ್ಯನು; ನನ್ನ ಕೈಕೆಳಗೆ ಸಿಪಾಯಿಗಳಿದ್ದಾರೆ; ನಾನು ಅವರಲ್ಲಿ ಒಬ್ಬನಿಗೆ ‘ಹೋಗು’ ಎಂದು ಹೇಳಿದರೆ ಹೋಗುತ್ತಾನೆ; ಮತ್ತೊಬ್ಬನಿಗೆ ‘ಬಾ’ ಎಂದು ಹೇಳಿದರೆ ಬರುತ್ತಾನೆ; ‘ನನ್ನ ಆಳಿಗೆ ಇಂಥಿಂಥದ್ದನ್ನು ಮಾಡು’ ಎಂದು ಹೇಳಿದರೆ ಮಾಡುತ್ತಾನೆ” ಅಂದನು.
Kannada BSI Bible 2016
ಯಾಕಂದರೆ ನಾನು ಅಧಿಕಾರದ ಕೆಳಗಿರುವ ಒಬ್ಬ ಮನುಷ್ಯನಾಗಿದ್ದರೂ ನನ್ನ ಅಧೀನದಲ್ಲಿ ಸೈನಿಕರಿದ್ದಾರೆ; ಮತ್ತು ನಾನು ಇವನಿಗೆ--ಹೋಗು ಅಂದರೆ ಇವನು ಹೋಗುತ್ತಾನೆ; ಮತ್ತೊಬ್ಬನಿಗೆ--ಬಾ ಅಂದರೆ ಅವನು ಬರುತ್ತಾನೆ; ಮತ್ತು ನನ್ನ ಸೇವಕನಿಗೆ--ಇದನ್ನು ಮಾಡು ಎಂದು ಹೇಳಿದರೆ ಅವನು ಮಾ
Kannada BSI JV (ಕನ್ನಡ ಸತ್ಯವೇದವು J.V. (BSI))
ನಾನು ಸಹ ಮತ್ತೊಬ್ಬರ ಕೈಕೆಳಗಿರುವವನು; ನನ್ನ ಕೈಕೆಳಗೆ ಸಿಪಾಯಿಗಳಿದ್ದಾರೆ; ನಾನು ಅವರಲ್ಲಿ ಒಬ್ಬನಿಗೆ ಹೋಗು ಎಂದು ಹೇಳಿದರೆ ಹೋಗುತ್ತಾನೆ; ಮತ್ತೊಬ್ಬನಿಗೆ ಬಾ ಎಂದು ಹೇಳಿದರೆ ಬರುತ್ತಾನೆ; ನನ್ನ ಆಳಿಗೆ ಇಂಥಿಂಥದನ್ನು ಮಾಡು ಎಂದು ಹೇಳಿದರೆ ಮಾಡುತ್ತಾನೆ ಅಂದನು.
Kannada Bible (KNCL) BSI 2016
ಏಕೆಂದರೆ, ನಾನೂ ಮತ್ತೊಬ್ಬರ ಕೈಕೆಳಗಿರುವವನು. ನನ್ನ ಅಧೀನದಲ್ಲೂ ಸೈನಿಕರಿದ್ದಾರೆ. ಅವರಲ್ಲಿ ಒಬ್ಬನಿಗೆ ನಾನು, ‘ಬಾ’ ಎಂದರೆ ಬರುತ್ತಾನೆ. ಇನ್ನೊಬ್ಬನಿಗೆ, ‘ಹೋಗು’ ಎಂದರೆ ಹೋಗುತ್ತಾನೆ. ಸೇವಕನಿಗೆ, ‘ಇಂಥದ್ದನ್ನು ಮಾಡು’ ಎಂದರೆ ಮಾಡುತ್ತಾನೆ,” ಎಂದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಏಕೆಂದರೆ ನಾನು ಸಹ ಮತ್ತೊಬ್ಬ ಅಧಿಕಾರಿಯ ಕೈಕೆಳಗಿರುವವನು, ನನ್ನ ಅಧೀನದಲ್ಲಿಯೂ ಸೈನಿಕರಿದ್ದಾರೆ ಮತ್ತು ನಾನು ಒಬ್ಬನಿಗೆ, ‘ಹೋಗು’ ಎಂದರೆ ಅವನು ಹೋಗುತ್ತಾನೆ. ಮತ್ತೊಬ್ಬನಿಗೆ, ‘ಬಾ’ ಎಂದರೆ ಅವನು ಬರುತ್ತಾನೆ. ನನ್ನ ಸೇವಕನಿಗೆ, ‘ಇದನ್ನು ಮಾಡು,’ ಎಂದರೆ ಅವನು ಮಾಡುತ್ತಾನೆ,” ಎಂದು ಹೇಳಿದನು.