Matthew 9:10 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯೇಸು ಮತ್ತಾಯನ ಮನೆಯಲ್ಲಿ ಊಟಕ್ಕೆ ಕುಳಿತುಕೊಂಡನು. ಅನೇಕ ಮಂದಿ ಸುಂಕವಸೂಲಿಗಾರರು ಮತ್ತು ಕೆಟ್ಟ ಜನರು ಸಹ ಯೇಸುವಿನ ಸಂಗಡ ಮತ್ತು ಆತನ ಹಿಂಬಾಲಕರ ಸಂಗಡ ಊಟಕ್ಕೆ ಕುಳಿತುಕೊಂಡರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅನಂತರ ಯೇಸು ಅವನ ಮನೆಯಲ್ಲಿ ಊಟಕ್ಕೆ ಕುಳಿತಿರುವಾಗ ಬಹು ಮಂದಿ ಸುಂಕದವರೂ ಪಾಪಿಗಳೂ ಬಂದು ಯೇಸುವಿನ ಮತ್ತು ಆತನ ಶಿಷ್ಯರ ಪಂಕ್ತಿಯಲ್ಲೇ ಕುಳಿತುಕೊಂಡರು.
Kannada BSI Bible 2016
ಇದಾದ ಮೇಲೆ ಯೇಸು ಅವನ ಮನೆಯಲ್ಲಿ ಊಟಕ್ಕೆ ಕೂತಿದ್ದಾಗ ಇಗೋ, ಬಹುಮಂದಿ ಸುಂಕ ದವರೂ ಪಾಪಿಗಳೂ ಬಂದು ಆತನೊಂದಿಗೂ ಆತನ ಶಿಷ್ಯರೊಂದಿಗೂ ಕೂತುಕೊಂಡರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅನಂತರ ಆತನು ಅವನ ಮನೆಯಲ್ಲಿ ಊಟಕ್ಕೆ ಕೂತಿರುವಾಗ ಬಹು ಮಂದಿ ಸುಂಕದವರೂ ಪಾಪಿಗಳೂ ಬಂದು ಯೇಸುವಿನ ಮತ್ತು ಆತನ ಶಿಷ್ಯರ ಪಙ್ತಿಯಲ್ಲೇ ಕೂತುಕೊಂಡರು.
Kannada Bible (KNCL) BSI 2016
ಇದಾದ ಮೇಲೆ ಯೇಸುಸ್ವಾಮಿ ಮತ್ತಾಯನ ಮನೆಯಲ್ಲಿ ಊಟಕ್ಕೆ ಕುಳಿತಿದ್ದರು. ಬಹುಮಂದಿ ‘ಸುಂಕದವರೂ’ ‘ಪಾಪಿಷ್ಠರೂ’ ಅಲ್ಲಿಗೆ ಬಂದರು. ಯೇಸು ಮತ್ತು ಅವರ ಶಿಷ್ಯರು ಕುಳಿತಿದ್ದ ಪಂಕ್ತಿಯಲ್ಲೇ ಇವರೂ ಊಟಕ್ಕೆ ಕುಳಿತರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇದಾದ ಮೇಲೆ ಯೇಸು ಮತ್ತಾಯನ ಮನೆಯಲ್ಲಿ ಊಟಕ್ಕೆ ಕುಳಿತಿದ್ದಾಗ, ಬಹುಮಂದಿ ಸುಂಕದವರೂ ಅಪಖ್ಯಾತಿಯ ಪಾಪಿಗಳೂ ಬಂದು ಯೇಸುವಿನೊಂದಿಗೂ ಅವರ ಶಿಷ್ಯರೊಂದಿಗೂ ಕುಳಿತುಕೊಂಡರು.