Matthew 9:11 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಇದನ್ನು ಕಂಡ ಫರಿಸಾಯರು ಯೇಸುವಿನ ಶಿಷ್ಯರಿಗೆ, “ನಿಮ್ಮ ಬೋಧಕನು ಸುಂಕವಸೂಲಿಗಾರರೊಂದಿಗೆ ಮತ್ತು ಕೆಟ್ಟ ಜನರೊಂದಿಗೆ ಏಕೆ ಊಟಮಾಡುತ್ತಾನೆ?” ಎಂದು ಕೇಳಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅದನ್ನು ನೋಡಿದ ಫರಿಸಾಯರು ಆತನ ಶಿಷ್ಯರನ್ನು, “ನಿಮ್ಮ ಗುರುವು ಸುಂಕದವರು ಮತ್ತು ಪಾಪಿಗಳ ಸಂಗಡ ಏಕೆ ಊಟಮಾಡುತ್ತಾನೆ?” ಎಂದು ಕೇಳಿದರು.
Kannada BSI Bible 2016
ಫರಿಸಾ ಯರು ಅದನ್ನು ನೋಡಿ ಆತನ ಶಿಷ್ಯರಿಗೆ--ನಿಮ್ಮ ಬೋಧಕನು ಸುಂಕದವರ ಮತ್ತು ಪಾಪಿಗಳ ಸಂಗಡ ಯಾಕೆ ಊಟ ಮಾಡುತ್ತಾನೆ ಎಂದು ಕೇಳಿದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಫರಿಸಾಯರು ಅದನ್ನು ನೋಡಿ ಆತನ ಶಿಷ್ಯರನ್ನು - ನಿಮ್ಮ ಗುರುವು ಸುಂಕದವರ ಮತ್ತು ಪಾಪಿಗಳ ಸಂಗಡ ಯಾಕೆ ಊಟಮಾಡುತ್ತಾನೆ ಎಂದು ಕೇಳಿದರು.
Kannada Bible (KNCL) BSI 2016
ಫರಿಸಾಯರು ಇದನ್ನು ಕಂಡದ್ದೇ ಯೇಸುವಿನ ಶಿಷ್ಯರನ್ನು ಉದ್ದೇಶಿಸಿ, “ನಿಮ್ಮ ಗುರು ಇಂತಹ ಬಹಿಷ್ಕೃತ ಜನರ ಜೊತೆಯಲ್ಲಿ ಊಟಮಾಡುವುದೇ?’ ಎಂದು ಆಕ್ಷೇಪಿಸಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಫರಿಸಾಯರು ಇದನ್ನು ಕಂಡು, “ನಿಮ್ಮ ಬೋಧಕನು ಸುಂಕದವರ ಮತ್ತು ಅಪಖ್ಯಾತಿಯ ಪಾಪಿಗಳ ಸಂಗಡ ಏಕೆ ಊಟಮಾಡುತ್ತಾನೆ?” ಎಂದು ಯೇಸುವಿನ ಶಿಷ್ಯರನ್ನು ಕೇಳಿದರು.