Matthew 9:13 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನೀವು ಹೋಗಿ, ‘ನನಗೆ ಯಜ್ಞ ಬೇಡ, ದಯೆ ಬೇಕು’ ಎಂದು ಪವಿತ್ರ ಗ್ರಂಥದಲ್ಲಿ ಬರೆದಿರುವ ವಾಕ್ಯದ ಅರ್ಥವನ್ನು ಕಲಿತುಕೊಳ್ಳಿ. ನಾನು ನೀತಿವಂತರನ್ನು ಕರೆಯಲು ಬರಲಿಲ್ಲ, ಪಾಪಿಗಳನ್ನು ಕರೆಯಲು ಬಂದೆನು” ಎಂದು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನೀವು ಹೋಗಿ, ‘ನಾನು ಯಜ್ಞವನ್ನಲ್ಲ, ಕರುಣೆಯನ್ನೇ ಅಪೇಕ್ಷಿಸುತ್ತೇನೆ’ ಎಂಬ ಮಾತಿನ ಅರ್ಥವನ್ನು ಕಲಿತುಕೊಳ್ಳಿರಿ. ನಾನು ನೀತಿವಂತರನ್ನು ಕರೆಯುವುದಕ್ಕೆ ಬಂದವನಲ್ಲ, ಆದರೆ ಪಾಪಿಗಳನ್ನು ಕರೆಯುವುದಕ್ಕೆ ಬಂದವನು” ಅಂದನು.
Kannada BSI Bible 2016
ನೀವು ಹೋಗಿ--ನಾನು ಯಜ್ಞವನ್ನಲ್ಲ; ಕರುಣೆಯನ್ನೇ ಅಪೇಕ್ಷಿಸುತ್ತೇನೆ ಎಂಬದರ ಅರ್ಥವನ್ನು ಕಲಿಯಿರಿ; ಯಾಕಂದರೆ ನಾನು ನೀತಿ ವಂತರನ್ನಲ್ಲ, ಪಾಪಿಗಳನ್ನು ಮಾನಸಾಂತರಪಡು ವದಕ್ಕಾಗಿ ಕರೆಯಲು ಬಂದೆನು ಎಂದು ಹೇಳಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ನೀವು ಹೋಗಿ - ನನಗೆ ಯಜ್ಞವು ಬೇಡ, ಕರುಣೆಯೇಬೇಕು ಎಂಬ ಮಾತಿನ ಅರ್ಥವನ್ನು ಕಲಿತುಕೊಳ್ಳಿರಿ. ನಾನು ನೀತಿವಂತರನ್ನು ಕರೆಯುವದಕ್ಕೆ ಬಂದವನಲ್ಲ, ಪಾಪಿಗಳನ್ನು ಕರೆಯುವದಕ್ಕೆ ಬಂದವನು ಅಂದನು.
Kannada Bible (KNCL) BSI 2016
ನೀವು ಹೋಗಿ, ನನಗೆ ಬೇಕಾದುದು ದಯೆ, ಯಜ್ಞಬಲಿಯಲ್ಲ’ ಎಂದು ಪವಿತ್ರಗ್ರಂಥದಲ್ಲಿ ಬರೆದಿರುವ ವಾಕ್ಯದ ಅರ್ಥವನ್ನು ಕಲಿತುಕೊಳ್ಳಿ. ನಾನು ಕರೆಯಲು ಬಂದಿರುವುದು ಧರ್ಮಿಷ್ಠರನ್ನಲ್ಲ, ಪಾಪಿಷ್ಠರನ್ನು,” ಎಂದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ ನೀವು ಹೋಗಿ, ‘ನಾನು ಯಜ್ಞವನ್ನಲ್ಲ, ಕರುಣೆಯನ್ನೇ ಅಪೇಕ್ಷಿಸುತ್ತೇನೆ,’ ಎಂಬುದರ ಅರ್ಥವನ್ನು ಕಲಿತುಕೊಳ್ಳಿರಿ. ಏಕೆಂದರೆ ನಾನು ನೀತಿವಂತರನ್ನಲ್ಲ, ಪಾಪಿಗಳನ್ನು ಕರೆಯಲು ಬಂದಿದ್ದೇನೆ,” ಎಂದು ಹೇಳಿದರು.