Matthew 9:15 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯೇಸು, “ಮದುವೆ ಸಮಯದಲ್ಲಿ ಮದುಮಗನ ಸಂಗಡವಿರುವ ಅವನ ಸ್ನೇಹಿತರು ದುಃಖಪಡುವುದಿಲ್ಲ. ಆದರೆ ಮದುಮಗನು ಅವರನ್ನು ಬಿಟ್ಟುಹೋಗುವ ಸಮಯ ಬರುತ್ತದೆ. ಆಗ ಅವರು ದುಃಖಪಡುತ್ತಾರೆ ಮತ್ತು ಉಪವಾಸ ಮಾಡುತ್ತಾರೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ಮದುವೆಯ ಅತಿಥಿಗಳು ತಮ್ಮ ಸಂಗಡ ಮದಲಿಂಗನು ಇರುವ ತನಕ ದುಃಖಪಡುವರೇ? ಆದರೆ ಮದಲಿಂಗನನ್ನು ಅವರ ಬಳಿಯಿಂದ ತೆಗೆದುಕೊಂಡುಹೋಗುವ ಕಾಲ ಬರುತ್ತದೆ; ಆಗ ಅವರು ಉಪವಾಸಮಾಡುವರು. ಯಾರೂ ಹೊಸ ಬಟ್ಟೆಯ ತುಂಡನ್ನು ಹಳೆಯ ವಸ್ತ್ರಕ್ಕೆ ತ್ಯಾಪೆ ಹಚ್ಚುವುದಿಲ್ಲ; ಹಾಗೆ ಹಚ್ಚಿದರೆ
Kannada BSI Bible 2016
ಅದಕ್ಕೆ ಯೇಸು ಅವರಿಗೆ--ಮದಲಿಂಗನು ತಮ್ಮ ಜೊತೆಯಲ್ಲಿರುವ ತನಕ ಮದಲಗಿತ್ತಿಯ ಮನೇ ಮಕ್ಕಳು ದುಃಖಪಡುವರೇ? ಆದರೆ ಮದಲಿಂಗನು ಅವರಿಂದ ತೆಗೆಯಲ್ಪಡುವ ದಿವಸಗಳು ಬರುವವು; ಆಗ ಅವರು ಉಪವಾಸ ಮಾಡುವರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೇಸು ಅವರಿಗೆ - ಮದುವೆಯ ಜನರು ತಮ್ಮ ಸಂಗಡ ಮದಲಿಂಗನು ಇರುವ ತನಕ ದುಃಖಪಟ್ಟಾರೋ? ಆದರೆ ಮದಲಿಂಗನನ್ನು ಅವರ ಬಳಿಯಿಂದ ತೆಗೆದುಕೊಂಡುಹೋಗುವ ಕಾಲ ಬರುತ್ತದೆ; ಆಗ ಉಪವಾಸಮಾಡುವರು. ಯಾರೂ ಹೊಸ ಬಟ್ಟೆಯ ತುಂಡನ್ನು ಹಳೆಯ ವಸ್ತ್ರಕ್ಕೆ ತ್ಯಾಪೆಹಚ್ಚುವದಿಲ್ಲ;
Kannada Bible (KNCL) BSI 2016
ಅದಕ್ಕೆ ಯೇಸು, “ಮದುವಣಿಗನು ಜೊತೆಯಲ್ಲಿ ಇರುವಷ್ಟು ಕಾಲ ಅವನ ಆಪ್ತರು ದುಃಖಪಡುವುದುಂಟೇ? ಮದುವಣಿಗನು ಅವರಿಂದ ಅಗಲಬೇಕಾಗುವ ಕಾಲವು ಬರುವುದು; ಆಗ ಅವರು ಉಪವಾಸ ಮಾಡುವರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅದಕ್ಕೆ ಯೇಸು ಅವರಿಗೆ, “ಮದುಮಗನು ತಮ್ಮ ಜೊತೆಯಲ್ಲಿ ಇರುವ ತನಕ ಮದುಮಗನ ಆಪ್ತರು ದುಃಖಪಡುವುದುಂಟೇ? ಆದರೆ ಮದುಮಗನು ಅಗಲಬೇಕಾಗುವ ದಿವಸಗಳು ಬರುತ್ತವೆ; ಆಗ ಅವರು ಉಪವಾಸ ಮಾಡುವರು.