Matthew 9:17 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಇದಲ್ಲದೆ ಜನರು ಹೊಸ ದ್ರಾಕ್ಷಾರಸವನ್ನು ಹಳೆ ದ್ರಾಕ್ಷಾರಸದ ಬುದ್ದಲಿಗಳಲ್ಲಿ ಹಾಕುವುದಿಲ್ಲ; ಏಕೆಂದರೆ ಹಳೆ ಬುದ್ದಲಿಗಳು ಒಡೆದುಹೋಗುತ್ತವೆ; ಮತ್ತು ದ್ರಾಕ್ಷಾರಸವು ಚೆಲ್ಲಿಹೋಗುತ್ತದೆ. ಆದ್ದರಿಂದ ಜನರು ಯಾವಾಗಲೂ ಹೊಸ ದ್ರಾಕ್ಷಾರಸವನ್ನು ಹೊಸ ಬುದ್ದಲಿಗಳಲ್ಲಿ ಹಾಕಿಡುವರು. ಆಗ ಎರಡೂ ಉಳಿಯುತ್ತವೆ” ಅಂದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇದಲ್ಲದೆ ಹಳೆಯ ಬುದ್ದಲಿಗಳಲ್ಲಿ ಹೊಸ ದ್ರಾಕ್ಷಾರಸವನ್ನು ಹಾಕಿಡುವುದಿಲ್ಲ; ಇಟ್ಟರೆ ಬುದ್ದಲಿಗಳು ಒಡೆದು ದ್ರಾಕ್ಷಾರಸವು ಚೆಲ್ಲಿಹೋಗುವುದಲ್ಲದೆ, ಬುದ್ದಲಿಗಳು ನಾಶವಾಗುವವು; ಆದರೆ ಹೊಸ ದ್ರಾಕ್ಷಾರಸವನ್ನು ಹೊಸ ಬುದ್ದಲಿಗಳಲ್ಲಿ ಹಾಕಿಡುತ್ತಾರೆ, ಆಗ ಎರಡೂ ಸಂರಕ್ಷಿಸಲ್ಪಡುವವು” ಎಂದು ಹೇಳಿದನು.
Kannada BSI Bible 2016
ಇಲ್ಲವೆ ಹೊಸ ದ್ರಾಕ್ಷಾರಸವನ್ನು ಹಳೇ ಬುದ್ದಲಿಗಳಲ್ಲಿ ಜನರು ಹಾಕುವದಿಲ್ಲ; ಹಾಕಿದರೆ ಅವು ಒಡೆದು ದ್ರಾಕ್ಷಾರಸವು ಚೆಲ್ಲಿಹೋಗಿ ಬುದ್ದಲಿಗಳು ನಾಶವಾಗುವವು; ಆದರೆ ಅವರು ಹೊಸ ದ್ರಾಕ್ಷಾ ರಸವನ್ನು ಹೊಸ ಬುದ್ದಲಿಗಳಲ್ಲಿ ಹಾಕುವರು; ಆಗ ಅವೆರಡೂ ಭದ್ರವಾಗಿರುವವು ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಇದಲ್ಲದೆ ಹಳೆಯ ಬುದ್ದಲಿಗಳಲ್ಲಿ ಹೊಸ ದ್ರಾಕ್ಷಾರಸವನ್ನು ಹಾಕಿಡುವದಿಲ್ಲ; ಇಟ್ಟರೆ ಬುದ್ದಲಿಗಳು ಒಡೆದು ದ್ರಾಕ್ಷಾರಸವು ಚೆಲ್ಲಿಹೋಗುವದು, ಬುದ್ದಲಿಗಳು ಕೆಟ್ಟುಹೋಗುವವು; ಆದರೆ ಹೊಸ ದ್ರಾಕ್ಷಾರಸವನ್ನು ಹೊಸ ಬುದ್ದಲಿಗಳಲ್ಲಿ ಹಾಕಿಡುತ್ತಾರೆ, ಆಗ ಎರಡೂ ಉಳಿಯುತ್ತವೆ ಎಂದು ಹೇಳಿದನು.
Kannada Bible (KNCL) BSI 2016
ಅಂತೆಯೇ ಹಳೆಯ ಬುದ್ದಲಿಗಳಲ್ಲಿ ಹೊಸ ಮದ್ಯವನ್ನು ತುಂಬಿಡುವುದಿಲ್ಲ. ತುಂಬಿಟ್ಟರೆ ಬುದ್ದಲಿಗಳು ಬಿರಿಯುತ್ತವೆ, ಮದ್ಯವು ಚೆಲ್ಲಿಹೋಗುತ್ತದೆ; ಬುದ್ದಲಿಗಳೂ ಹಾಳಾಗುತ್ತವೆ. ಹೊಸ ಮದ್ಯವನ್ನು ಹೊಸ ಬುದ್ದಲಿಗಳಲ್ಲೇ ತುಂಬಿಡುತ್ತಾರೆ. ಆಗ ಎರಡೂ ಉಳಿಯುತ್ತವೆ,” ಎಂದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅಂತೆಯೇ ಜನರು ಹೊಸ ದ್ರಾಕ್ಷಾರಸವನ್ನು ಹಳೆಯ ಚರ್ಮದ ಚೀಲಗಳಲ್ಲಿ ತುಂಬಿಡುವುದಿಲ್ಲ. ಅವರು ಹಾಗೇನಾದರೂ ಮಾಡಿದರೆ ಚರ್ಮದ ಚೀಲಗಳು ಹರಿದು, ದ್ರಾಕ್ಷಾರಸವು ಚೆಲ್ಲಿಹೋಗಿ ಚರ್ಮದ ಚೀಲಗಳು ಹಾಳಾಗುತ್ತವೆ. ಹೊಸ ದ್ರಾಕ್ಷಾರಸವನ್ನು ಹೊಸ ಚರ್ಮದ ಚೀಲಗಳಲ್ಲಿ ತುಂಬಿಡುತ್ತಾರೆ. ಆಗ ಅವೆರಡೂ ಉಳಿಯುತ್ತವೆ,” ಎಂದರು.