Matthew 9:18 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯೇಸು ಈ ಸಂಗತಿಗಳನ್ನು ಹೇಳುತ್ತಿರುವಾಗ ಸಭಾಮಂದಿರದ ಅಧಿಕಾರಿಯೊಬ್ಬನು ಆತನ ಬಳಿಗೆ ಬಂದು ಆತನಿಗೆ ಬಾಗಿ ನಮಸ್ಕರಿಸಿ, “ನನ್ನ ಮಗಳು ಈಗ ತಾನೇ ಸತ್ತುಹೋದಳು. ನೀನು ಬಂದು ಅವಳನ್ನು ಮುಟ್ಟಿದರೆ ಅವಳು ಮತ್ತೆ ಜೀವಂತಳಾಗುವಳು” ಎಂದು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಹೀಗೆ ಯೇಸು ಅವರೊಂದಿಗೆ ಮಾತನಾಡುತ್ತಿರುವಾಗ ಒಬ್ಬ ಅಧಿಕಾರಿಯು ಬಂದು ಆತನಿಗೆ ಅಡ್ಡಬಿದ್ದು, “ನನ್ನ ಮಗಳು ಈಗಲೇ ತೀರಿಹೋದಳು; ಆದಾಗ್ಯೂ ನೀನು ಬಂದು ಆಕೆಯ ಮೇಲೆ ಕೈ ಇಟ್ಟರೆ ಬದುಕುವಳು” ಎಂದು ಬೇಡಿಕೊಂಡನು.
Kannada BSI Bible 2016
ಆತನು ಈ ವಿಷಯಗಳನ್ನು ಅವರೊಂದಿಗೆ ಮಾತನಾಡುತ್ತಿದ್ದಾಗ ಇಗೋ, ಒಬ್ಬ ಅಧಿಕಾರಿಯು ಬಂದು ಆತನನ್ನು ಆರಾಧಿಸಿ--ನನ್ನ ಮಗಳು ಇದೀಗಲೇ ಸತ್ತು ಹೋಗಿರುವಳು; ಆದರೆ ನೀನು ಬಂದು ಆಕೆಯ ಮೇಲೆ ನಿನ್ನ ಕೈಯನ್ನಿಡು; ಆಗ ಅವಳು ಬದುಕುವಳು ಎಂದು ಹೇಳಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಹೀಗೆ ಆತನು ಅವರೊಂದಿಗೆ ಮಾತಾಡುತ್ತಿರುವಾಗ ಒಬ್ಬ ಅಧಿಕಾರಿ ಬಂದು ಆತನಿಗೆ ಅಡ್ಡಬಿದ್ದು - ನನ್ನ ಮಗಳು ಈಗಲೇ ತೀರಿಹೋದಳು; ಆದಾಗ್ಯೂ ನೀನು ಬಂದು ಆಕೆಯ ಮೇಲೆ ಕೈ ಇಟ್ಟರೆ ಬದುಕುವಳು ಎಂದು ಬೇಡಿಕೊಳ್ಳಲು
Kannada Bible (KNCL) BSI 2016
ಯೇಸುಸ್ವಾಮಿ ಹೀಗೆ ಬೋಧಿಸುತ್ತಿರುವಾಗಲೇ ಯೆಹೂದ್ಯ ಅಧಿಕಾರಿಯೊಬ್ಬನು ಅಲ್ಲಿಗೆ ಬಂದನು. ಅವನು ಯೇಸುವಿನ ಮುಂದೆ ಮೊಣಕಾಲೂರಿ, “ನನ್ನ ಮಗಳು ಈಗ ತಾನೆ ಸತ್ತುಹೋದಳು. ಆದರೂ ತಾವು ದಯಮಾಡಿಸಿ ತಮ್ಮ ಹಸ್ತವನ್ನು ಆಕೆಯ ಮೇಲಿಡಬೇಕು. ಅವಳು ಮರಳಿ ಬದುಕುವಳು,” ಎಂದು ಬೇಡಿಕೊಂಡನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೇಸು ಇದೆಲ್ಲವನ್ನು ಅವರೊಂದಿಗೆ ಮಾತನಾಡುತ್ತಿದ್ದಾಗ, ಸಭಾಮಂದಿರದ ಒಬ್ಬ ಅಧಿಕಾರಿಯು ಬಂದು ಯೇಸುವಿನ ಮುಂದೆ ಮೊಣಕಾಲೂರಿ, “ನನ್ನ ಮಗಳು ಈಗ ತಾನೆ ಸತ್ತುಹೋದಳು. ಆದರೂ ನೀವು ಬಂದು ಆಕೆಯ ಮೇಲೆ ನಿಮ್ಮ ಕೈಯನ್ನಿಡಿರಿ; ಆಗ ಅವಳು ಬದುಕುವಳು,” ಎಂದು ಹೇಳಿದನು.