Matthew 9:2 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಕೆಲವರು ಒಬ್ಬ ಪಾರ್ಶ್ವವಾಯು ರೋಗಿಯನ್ನು ಯೇಸುವಿನ ಬಳಿಗೆ ತಂದರು. ಅವನು ತನ್ನ ಹಾಸಿಗೆಯ ಮೇಲೆ ಮಲಗಿದ್ದನು. ಯೇಸು ಈ ಜನರಲ್ಲಿದ್ದ ದೊಡ್ಡ ನಂಬಿಕೆಯನ್ನು ಕಂಡು ಪಾರ್ಶ್ವವಾಯು ರೋಗಿಗೆ, “ಯುವಕನೇ, ಸಂತೋಷಪಡು. ನಿನ್ನ ಪಾಪಗಳು ಕ್ಷಮಿಸಲ್ಪಟ್ಟಿವೆ” ಎಂದು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅಲ್ಲಿಗೆ ಯೇಸು ಬಂದಾಗ ಹಾಸಿಗೆಯ ಮೇಲೆ ಬಿದ್ದುಕೊಂಡಿದ್ದ ಒಬ್ಬ ಪಾರ್ಶ್ವವಾಯು ರೋಗಿಯನ್ನು ಆತನ ಬಳಿಗೆ ಹೊತ್ತುಕೊಂಡು ಬಂದರು. ಯೇಸು ರೋಗಿಯನ್ನು ಹೊತ್ತುಕೊಂಡು ಬಂದವರ ನಂಬಿಕೆಯನ್ನು ನೋಡಿ ಪಾರ್ಶ್ವವಾಯು ರೋಗಿಗೆ, “ಮಗನೇ ಧೈರ್ಯವಾಗಿರು, ನಿನ್ನ ಪಾಪಗಳು ಕ್ಷಮಿಸಲ್ಪಟ್ಟಿವೆ” ಎಂದು ಹೇಳಿದನು.
Kannada BSI Bible 2016
ಇಗೋ, ಹಾಸಿಗೆಯ ಮೇಲೆ ಮಲಗಿದ್ದ ಒಬ್ಬ ಪಾರ್ಶ್ವವಾಯು ರೋಗಿಯನ್ನು ಜನರು ಆತನ ಬಳಿಗೆ ತಂದರು; ಮತ್ತು ಯೇಸು ಅವರ ನಂಬಿಕೆಯನ್ನು ನೋಡಿ ಆ ಪಾರ್ಶ್ವವಾಯು ರೋಗಿಗೆ--ಮಗನೇ, ಧೈರ್ಯವಾಗಿರು, ನಿನ್ನ ಪಾಪಗಳು ಕ್ಷಮಿಸಲ್ಪಟ್ಟಿವೆ ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅಲ್ಲಿಗೆ ಬಂದಾಗ ಹಾಸಿಗೆಯ ಮೇಲೆ ಬಿದ್ದುಕೊಂಡಿರುವ ಒಬ್ಬ ಪಾರ್ಶ್ವವಾಯು ರೋಗಿಯನ್ನು ಆತನ ಬಳಿಗೆ ಹೊತ್ತುಕೊಂಡು ಬಂದರು. ಯೇಸು ಅವರ ನಂಬಿಕೆಯನ್ನು ನೋಡಿ ಪಾರ್ಶ್ವವಾಯುರೋಗಿಗೆ - ಮಗನೇ, ಧೈರ್ಯವಾಗಿರು, ನಿನ್ನ ಪಾಪಗಳು ಕ್ಷವಿುಸಲ್ಪಟ್ಟಿವೆ ಎಂದು ಹೇಳಿದನು.
Kannada Bible (KNCL) BSI 2016
ಆಗ ಜನರು ಒಬ್ಬ ಪಾರ್ಶ್ವವಾಯು ರೋಗಿಯನ್ನು ಹಾಸಿಗೆಯ ಸಮೇತ ಹೊತ್ತುಕೊಂಡು ಅವರ ಬಳಿಗೆ ತಂದರು. ಯೇಸು ಅವರ ವಿಶ್ವಾಸವನ್ನು ಮೆಚ್ಚಿ, ಆ ಪಾರ್ಶ್ವವಾಯು ರೋಗಿಗೆ, “ಮಗು, ಧೈರ್ಯದಿಂದಿರು. ನಿನ್ನ ಪಾಪಗಳನ್ನು ಕ್ಷಮಿಸಲಾಗಿದೆ,” ಎಂದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಹಾಸಿಗೆಯ ಮೇಲೆ ಮಲಗಿದ್ದ, ಒಬ್ಬ ಪಾರ್ಶ್ವವಾಯು ರೋಗಿಯನ್ನು ಜನರು ಯೇಸುವಿನ ಬಳಿಗೆ ತಂದರು. ಯೇಸು ಅವರ ನಂಬಿಕೆಯನ್ನು ಕಂಡು, ಆ ಪಾರ್ಶ್ವವಾಯು ರೋಗಿಗೆ, “ಮಗನೇ, ಧೈರ್ಯವಾಗಿರು. ನಿನ್ನ ಪಾಪಗಳು ಕ್ಷಮಿಸಲಾಗಿವೆ,” ಎಂದರು.