Matthew 9:21 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆ ಹೆಂಗಸು, “ನಾನು ಆತನ ಅಂಗಿಯನ್ನು ಮುಟ್ಟಿದರೆ ಸಾಕು, ನಾನು ಗುಣವಾಗಬಲ್ಲೆ” ಎಂದು ಆಲೋಚನೆ ಮಾಡಿಕೊಂಡಿದ್ದಳು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ನಾನು ಆತನ ಉಡುಪನ್ನು ಮುಟ್ಟಿದರೆ ಸಾಕು, ಸ್ವಸ್ಥಳಾಗುವೆ ಎಂದು ಮನಸ್ಸಿನಲ್ಲಿ” ಅಂದುಕೊಂಡು ಹಿಂದಿನಿಂದ ಬಂದು ಯೇಸುವಿನ ಉಡುಪಿನ ಅಂಚನ್ನು ಮುಟ್ಟಿದಳು.
Kannada BSI Bible 2016
ಯಾಕಂದರೆ--ನಾನು ಆತನ ಉಡುಪನ್ನು ಮುಟ್ಟಿದರೆ ಸಾಕು, ಗುಣವಾಗುವೆನು ಎಂದು ಆಕೆಯು ತನ್ನೊಳಗೆ ಅಂದುಕೊಂಡಿದ್ದಳು.
Kannada BSI JV (ಕನ್ನಡ ಸತ್ಯವೇದವು J.V. (BSI))
ನಾನು ಆತನ ಉಡುಪನ್ನು ಮುಟ್ಟಿದರೆ ಸಾಕು, ನೆಟ್ಟಗಾಗುವೆನು ಎಂದು ಮನಸ್ಸಿನಲ್ಲಿ ಅಂದುಕೊಂಡು ಹಿಂದಿನಿಂದ ಬಂದು ಆತನ ಉಡುಪಿನ ಗೊಂಡೆಯನ್ನು ಮುಟ್ಟಿದಳು.
Kannada Bible (KNCL) BSI 2016
‘ನಾನು ಅವರ ಉಡುಪನ್ನು ಮುಟ್ಟಿದರೂ ಸಾಕು, ಗುಣಹೊಂದುವೆನು’ ಎಂದುಕೊಂಡಿದ್ದಳು ಆಕೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ನಾನು ಯೇಸುವಿನ ಉಡುಪನ್ನು ಮುಟ್ಟಿದರೆ ಸಾಕು, ನನಗೆ ಗುಣವಾಗುವುದು,” ಎಂದು ಆಕೆಯು ತನ್ನೊಳಗೆ ಹೇಳಿಕೊಂಡಳು.