Matthew 9:22 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯೇಸು ಹಿಂತಿರುಗಿ ಆ ಹೆಂಗಸನ್ನು ನೋಡಿ, “ಮಗಳೇ, ಸಂತೋಷಪಡು! ನಿನ್ನ ನಂಬಿಕೆಯಿಂದಲೇ ನಿನಗೆ ಗುಣವಾಯಿತು” ಎಂದು ಹೇಳಿದನು. ಆಗ ಅವಳು ಗುಣಮುಖಳಾದಳು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ಯೇಸು ಹಿಂತಿರುಗಿ ಆಕೆಯನ್ನು ನೋಡಿ, “ಮಗಳೇ, ಧೈರ್ಯವಾಗಿರು; ನಿನ್ನ ನಂಬಿಕೆಯೇ ನಿನ್ನನ್ನು ಸ್ವಸ್ಥಮಾಡಿತು” ಅಂದನು. ಆ ಕ್ಷಣವೇ ಆ ಹೆಂಗಸು ಸ್ವಸ್ಥಳಾದಳು.
Kannada BSI Bible 2016
ಆದರೆ ಯೇಸು ಹಿಂತಿರುಗಿ ಆಕೆಯನ್ನು ನೋಡಿ--ಮಗಳೇ, ಸಮಾಧಾನದಿಂದಿರು; ನಿನ್ನ ನಂಬಿಕೆಯು ನಿನ್ನನ್ನು ಸ್ವಸ್ಥ ಮಾಡಿಯದೆ ಅಂದನು. ಅದೇ ಗಳಿಗೆಯಲ್ಲಿ ಆ ಸ್ತ್ರೀಯು ಸ್ವಸ್ಥಳಾದಳು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಗ ಯೇಸು ಹಿಂತಿರುಗಿ ಆಕೆಯನ್ನು ನೋಡಿ - ಮಗಳೇ, ಧೈರ್ಯವಾಗಿರು; ನಿನ್ನ ನಂಬಿಕೆಯೇ ನಿನ್ನನ್ನು ಸ್ವಸ್ಥಮಾಡಿತು ಅಂದನು. ಆ ಕ್ಷಣವೇ ಆ ಹೆಂಗಸು ಸ್ವಸ್ಥವಾದಳು.
Kannada Bible (KNCL) BSI 2016
ಯೇಸು ಹಿಂದಿರುಗಿ ಆಕೆಯನ್ನು ನೋಡಿ, “ಮಗಳೇ ಹೆದರಬೇಡ, ನಿನ್ನ ವಿಶ್ವಾಸ ನಿನ್ನನ್ನು ಗುಣಪಡಿಸಿದೆ,” ಎಂದರು. ಆ ಕ್ಷಣದಲ್ಲೇ ಆಕೆ ವ್ಯಾಧಿಯಿಂದ ಮುಕ್ತಳಾದಳು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೇಸು ಹಿಂತಿರುಗಿ ಆಕೆಯನ್ನು ನೋಡಿ, “ಮಗಳೇ, ಧೈರ್ಯವಾಗಿರು; ನಿನ್ನ ನಂಬಿಕೆಯೇ ನಿನ್ನನ್ನು ಗುಣಪಡಿಸಿದೆ,” ಎಂದರು. ಆ ಗಳಿಗೆಯಲ್ಲೇ ಆ ಸ್ತ್ರೀಯು ಸ್ವಸ್ಥಳಾದಳು.