Matthew 9:24 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ದೂರ ಹೋಗಿರಿ, ಹುಡುಗಿ ಸತ್ತಿಲ್ಲ. ಅವಳು ನಿದ್ದೆ ಮಾಡುತ್ತಿದ್ದಾಳೆ” ಅಂದನು. ಆದರೆ ಅವರು ಯೇಸುವನ್ನು ಅಪಹಾಸ್ಯ ಮಾಡಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ಹೊರಗೆ ಹೋಗಿರಿ; ಹುಡುಗಿ ಸತ್ತಿಲ್ಲ ನಿದ್ರಿಸುತ್ತಿದ್ದಾಳೆ” ಅಂದನು. ಅದಕ್ಕೆ ಅವರು ಆತನನ್ನು ಪರಿಹಾಸ್ಯ ಮಾಡಿದರು.
Kannada BSI Bible 2016
ಅವರಿಗೆ--ಸ್ಥಳ ಬಿಡಿರಿ; ಯಾಕಂದರೆ ಹುಡುಗಿಯು ಸತ್ತಿಲ್ಲ, ನಿದ್ರೆ ಮಾಡುತ್ತಾಳೆ ಅಂದನು. ಅದಕ್ಕವರು ಆತನನ್ನು ಹಾಸ್ಯ ಮಾಡಿ ನಕ್ಕರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಹೊರಗೆ ಹೋಗಿರಿ; ಹುಡುಗಿ ಸತ್ತಿಲ್ಲ, ನಿದ್ದೆಮಾಡುತ್ತಾಳೆ ಅನ್ನಲು ಅವರು ಆತನನ್ನು ಹಾಸ್ಯಮಾಡಿದರು.
Kannada Bible (KNCL) BSI 2016
“ಎಲ್ಲರೂ ಇಲ್ಲಿಂದ ಹೊರಡಿರಿ, ಬಾಲಕಿ ಸತ್ತಿಲ್ಲ; ನಿದ್ರಿಸುತ್ತಿದ್ದಾಳೆ,” ಎಂದರು. ಜನರು ನಕ್ಕು ಅವರನ್ನು ಪರಿಹಾಸ್ಯಮಾಡಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವರಿಗೆ, “ಹೊರಗೆ ಹೋಗಿರಿ, ಬಾಲಕಿಯು ಸತ್ತಿಲ್ಲ, ನಿದ್ರಿಸುತ್ತಿದ್ದಾಳೆ,” ಎಂದರು. ಅದಕ್ಕವರು ನಕ್ಕು ಯೇಸುವನ್ನು ಹಾಸ್ಯಮಾಡಿದರು.