Matthew 9:27 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯೇಸು ಅಲ್ಲಿಂದ ಹೊರಡುತ್ತಿರುವಾಗ ಇಬ್ಬರು ಕುರುಡರು ಆತನನ್ನು ಹಿಂಬಾಲಿಸಿದರು. ಅವರು, “ದಾವೀದನ ಕುಮಾರನೇ, ನಮಗೆ ದಯೆ ತೋರು” ಎಂದು ಗಟ್ಟಿಯಾಗಿ ಕೂಗಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೇಸು ಅಲ್ಲಿಂದ ಹಾದುಹೋಗುತ್ತಿರುವಾಗ ಇಬ್ಬರು ಕುರುಡರು, “ದಾವೀದ ಕುಮಾರನೇ, ನಮ್ಮನ್ನು ಕರುಣಿಸು” ಎಂದು ಕೂಗುತ್ತಾ ಆತನನ್ನು ಹಿಂಬಾಲಿಸಿದರು.
Kannada BSI Bible 2016
ಯೇಸು ಅಲ್ಲಿಂದ ಹೊರಟಾಗ ಇಬ್ಬರು ಕುರುಡರು ಆತನನ್ನು ಹಿಂಬಾಲಿಸುತ್ತಾ--ದಾವೀದ ಕುಮಾರನೇ, ನಮ್ಮ ಮೇಲೆ ಕರುಣೆ ಇಡು ಎಂದು ಕೂಗಿ ಹೇಳುತ್ತಿದ್ದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೇಸು ಅಲ್ಲಿಂದ ಹೋಗುವಾಗ ಇಬ್ಬರು ಕುರುಡರು - ದಾವೀದನ ಕುಮಾರನೇ, ನಮ್ಮನ್ನು ಕರುಣಿಸು ಎಂದು ಕೂಗುತ್ತಾ ಆತನ ಹಿಂದೆ ಹೋದರು.
Kannada Bible (KNCL) BSI 2016
ಯೇಸುಸ್ವಾಮಿ ಅಲ್ಲಿಂದ ಹೋಗುತ್ತಿರುವಾಗ ಇಬ್ಬರು ಕುರುಡರು, “ಸ್ವಾಮೀ, ದಾವೀದ ಕುಲಪುತ್ರರೇ, ನಮಗೆ ದಯೆತೋರಿ,” ಎಂದು ದನಿಯೆತ್ತಿ ಕೂಗಿಕೊಳ್ಳುತ್ತಾ ಅವರ ಹಿಂದೆಹೋದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೇಸು ಅಲ್ಲಿಂದ ಹೋಗುತ್ತಿರುವಾಗ ಇಬ್ಬರು ಕುರುಡರು, “ದಾವೀದನ ಪುತ್ರನೇ, ನಮ್ಮ ಮೇಲೆ ಕರುಣೆಯಿಡು,” ಎಂದು ಮೊರೆಯಿಡುತ್ತಾ ಯೇಸುವಿನ ಹಿಂದೆ ಹೋದರು.