Matthew 9:28 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯೇಸು ಮನೆಯೊಳಗೆ ಹೋದನು. ಕುರುಡರೂ ಆತನ ಸಂಗಡ ಹೋದರು. ಯೇಸು ಅವರಿಗೆ, “ನಾನು ನಿಮ್ಮನ್ನು ಗುಣಪಡಿಸಬಲ್ಲೆನೆಂದು ನೀವು ನಂಬುತ್ತೀರೋ?” ಎಂದು ಕೇಳಿದನು. ಕುರುಡರು, “ಹೌದು ಪ್ರಭುವೇ, ನಾವು ನಂಬುತ್ತೇವೆ” ಎಂದು ಉತ್ತರಕೊಟ್ಟರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೇಸು ಮನೆಗೆ ಬಂದಾಗ ಆ ಕುರುಡರು ಆತನ ಬಳಿಗೆ ಬಂದರು. ಯೇಸು ಅವರನ್ನು, “ನಾನು ಇದನ್ನು ಮಾಡಬಲ್ಲೆನೆಂಬುದನ್ನು ನೀವು ನಂಬುತ್ತೀರೋ” ಎಂದು ಕೇಳಿದ್ದಕ್ಕೆ, ಅವರು “ಹೌದು, ಕರ್ತನೇ, ನಂಬುತ್ತೇವೆ” ಅಂದರು.
Kannada BSI Bible 2016
ಆತನು ಮನೆಯೊಳಕ್ಕೆ ಬಂದಾಗ ಆ ಕುರುಡರು ಆತನ ಬಳಿಗೆ ಬಂದರು; ಆಗ ಯೇಸು ಅವರಿಗೆ--ನಾನು ಇದನ್ನು ಮಾಡಲು ಶಕ್ತನೆಂದು ನೀವು ನಂಬುತ್ತೀರೋ ಎಂದು ಕೇಳಿದಾಗ ಅವರು ಆತನಿಗೆ--ಕರ್ತನೇ, ಹೌದು ಎಂದು ಅಂದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆತನು ಮನೆಗೆ ಬಂದಾಗ ಆ ಕುರುಡರು ಆತನ ಬಳಿಗೆ ಬಂದರು. ಯೇಸು ಅವರನ್ನು - ನಾನು ಇದನ್ನು ಮಾಡಬಲ್ಲೆನೆಂಬದನ್ನು ನಂಬುತ್ತೀರೋ ಎಂದು ಕೇಳಿದ್ದಕ್ಕೆ ಅವರು - ಹೌದು, ಸ್ವಾಮೀ, ನಂಬುತ್ತೇವೆ ಅಂದರು.
Kannada Bible (KNCL) BSI 2016
ಯೇಸು ಮನೆ ಸೇರಿದಾಗ ಆ ಕುರುಡರು ಸಮೀಪಕ್ಕೆ ಬಂದರು. “ನಾನು ನಿಮ್ಮನ್ನು ಗುಣಪಡಿಸಬಲ್ಲೆನೆಂದು ನೀವು ವಿಶ್ವಾಸವಿಡುತ್ತೀರೋ?” ಎಂದು ಯೇಸು ಪ್ರಶ್ನಿಸಿದರು. “ಹೌದು ಸ್ವಾಮೀ, ಹೌದು,” ಎಂದು ಅವರು ಉತ್ತರವಿತ್ತರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೇಸು ಮನೆಗೆ ಬಂದಾಗ, ಆ ಕುರುಡರು ಅವರ ಬಳಿಗೆ ಬಂದರು. ಆಗ ಯೇಸು ಅವರಿಗೆ, “ನಾನು ಇದನ್ನು ಮಾಡಲು ಶಕ್ತನೆಂದು ನೀವು ನಂಬುತ್ತೀರೋ?” ಎಂದು ಕೇಳಿದರು. ಅದಕ್ಕವರು ಯೇಸುವಿಗೆ, “ಹೌದು ಕರ್ತನೆ,” ಎಂದರು.