Matthew 9:3 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಅಲ್ಲಿದ್ದ ಧರ್ಮೋಪದೇಶಕರು ಇದನ್ನು ಕೇಳಿ, “ಇದು ದೇವದೂಷಣೆ” ಎಂದು ತಮ್ಮೊಳಗೆ ಅಂದುಕೊಂಡರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅಲ್ಲಿದ್ದ ಶಾಸ್ತ್ರಿಗಳಲ್ಲಿ ಕೆಲವರು, “ಇವನು ದೇವದೂಷಣೆ ಮಾಡುತ್ತಾನೆಂದು” ತಮ್ಮತಮ್ಮೊಳಗೆ ಮಾತನಾಡಿಕೊಂಡರು.
Kannada BSI Bible 2016
ಆಗ ಇಗೋ, ಶಾಸ್ತ್ರಿಗಳಲ್ಲಿ ಕೆಲವರು-- ಈ ಮನುಷ್ಯನು ದೇವದೂಷಣೆ ಮಾಡುತ್ತಾನೆ ಎಂದು ತಮ್ಮತಮ್ಮಲ್ಲಿ ಅಂದುಕೊಂಡರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅಲ್ಲಿದ್ದ ಶಾಸ್ತ್ರಿಗಳಲ್ಲಿ ಕೆಲವರು - ಇವನು ದೇವದೂಷಣೆ ಮಾಡುತ್ತಾನೆಂದು ತಮ್ಮತಮ್ಮೊಳಗೆ ಮಾತಾಡಿಕೊಂಡರು.
Kannada Bible (KNCL) BSI 2016
ಆಗ ಅಲ್ಲಿದ್ದ ಧರ್ಮಶಾಸ್ತ್ರಿಗಳಲ್ಲಿ ಕೆಲವರು, “ಇವನು ದೇವದೂಷಣೆ ಮಾಡುತ್ತಿದ್ದಾನೆ,” ಎಂದುಕೊಂಡರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ನಿಯಮ ಬೋಧಕರಲ್ಲಿ ಕೆಲವರು, “ಈತನು ದೇವದೂಷಣೆ ಮಾಡುತ್ತಿದ್ದಾನೆ,” ಎಂದು ತಮ್ಮತಮ್ಮೊಳಗೆ ಮಾತನಾಡಿಕೊಂಡರು.