Matthew 9:30 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಕೂಡಲೇ ಅವರಿಗೆ ದೃಷ್ಟಿ ಬಂದಿತು. “ಈ ವಿಷಯವನ್ನು ಯಾರಿಗೂ ಹೇಳಬಾರದು” ಎಂದು ಯೇಸು ಅವರಿಗೆ ಎಚ್ಚರಿಕೆ ನೀಡಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಂತರ ಯೇಸು ಅವರಿಗೆ, “ಇದು ಯಾರಿಗೂ ತಿಳಿಯದಂತೆ ನೋಡಿಕೊಳ್ಳಿರಿ” ಎಂದು ಕಟ್ಟುನಿಟ್ಟಾಗಿ ಆದೇಶಿಸಿದನು.
Kannada BSI Bible 2016
ಆಗ ಅವರ ಕಣ್ಣುಗಳು ತೆರೆಯಲ್ಪಟ್ಟವು; ಮತ್ತು ಯೇಸು ಅವರಿಗೆ--ಇದು ಯಾರಿಗೂ ಗೊತ್ತಾಗಬಾರದು ನೋಡಿರಿ ಎಂದು ಅವರಿಗೆ ಖಂಡಿತವಾಗಿ ಅಪ್ಪಣೆಕೊಟ್ಟು ಹೇಳಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಗ ಅವರಿಗೆ ಕಣ್ಣು ಬಂದವು. ಮತ್ತು ಯೇಸು ಅವರಿಗೆ - ಇದು ಯಾರಿಗೂ ತಿಳಿಯಬಾರದು ನೋಡಿರಿ ಎಂದು ಖಂಡಿತವಾಗಿ ಹೇಳಿದನು.
Kannada Bible (KNCL) BSI 2016
ಅವರಿಗೆ ದೃಷ್ಟಿ ಬಂದಿತು. “ಈ ವಿಷಯ ಯಾರಿಗೂ ತಿಳಿಯಬಾರದು, ಎಚ್ಚರಿಕೆ!” ಎಂದು ಯೇಸು ಅವರಿಗೆ ಕಟ್ಟಪ್ಪಣೆ ಮಾಡಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಅವರಿಗೆ ದೃಷ್ಟಿ ಬಂದಿತು. ಯೇಸು ಅವರಿಗೆ, “ಇದು ಯಾರಿಗೂ ತಿಳಿಯಬಾರದು,” ಎಂದು ಅವರಿಗೆ ಖಂಡಿತವಾಗಿ ಎಚ್ಚರಿಸಿದರು.