Matthew 9:32 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅವರಿಬ್ಬರು ಹೋಗುತ್ತಿರುವಾಗ ಕೆಲವರು ಬೇರೊಬ್ಬನನ್ನು ಯೇಸುವಿನ ಬಳಿಗೆ ತಂದರು. ಅವನಲ್ಲಿ ದೆವ್ವವಿದ್ದುದರಿಂದ ಅವನು ಮೂಕನಾಗಿದ್ದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವರು ಹೊರಟುಹೋಗುತ್ತಿರುವಾಗ ದೆವ್ವಹಿಡಿದ ಒಬ್ಬ ಮೂಕನನ್ನು ಯೇಸುವಿನ ಬಳಿಗೆ ಕರೆತಂದರು.
Kannada BSI Bible 2016
ಅವರು ಹೊರಟು ಹೋಗುತ್ತಿದ್ದಾಗ ಇಗೋ, ದೆವ್ವ ಹಿಡಿದಿದ್ದ ಮೂಕನಾದ ಒಬ್ಬ ಮನುಷ್ಯನನ್ನು ಅವರು ಆತನ ಬಳಿಗೆ ತಂದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವರು ಹೊರಟುಹೋಗುತ್ತಿರುವಾಗ ದೆವ್ವಹಿಡಿದ ಒಬ್ಬ ಮೂಕನನ್ನು ಆತನ ಬಳಿಗೆ ಕರತಂದರು.
Kannada Bible (KNCL) BSI 2016
ಕುರುಡರು ಹೊರಟುಹೋಗುತ್ತಿದ್ದ ಹಾಗೆ, ದೆವ್ವ ಹಿಡಿದಿದ್ದ ಒಬ್ಬ ಮೂಕನನ್ನು ಕೆಲವರು ಯೇಸುಸ್ವಾಮಿಯ ಬಳಿಗೆ ಕರೆತಂದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೇಸು ಮತ್ತು ಶಿಷ್ಯರು ಹೊರಟು ಹೋಗುತ್ತಿದ್ದಾಗ, ದೆವ್ವ ಹಿಡಿದಿದ್ದ ಒಬ್ಬ ಮೂಕನನ್ನು ಕೆಲವರು ಯೇಸುವಿನ ಬಳಿಗೆ ತಂದರು.