Matthew 9:33 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯೇಸು ಆ ದೆವ್ವಕ್ಕೆ ಅವನನ್ನು ಬಿಟ್ಟುಹೋಗುವಂತೆ ಆಜ್ಞಾಪಿಸಿದನು. ಅವನು ಮಾತನಾಡತೊಡಗಿದನು. ಇದನ್ನು ಕಂಡ ಜನರು ಆಶ್ಚರ್ಯಚಕಿತರಾಗಿ, “ಇಸ್ರೇಲಿನಲ್ಲಿ ಇಂಥ ಕಾರ್ಯವನ್ನು ನೋಡಿಯೇ ಇಲ್ಲ” ಅಂದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ದೆವ್ವ ಬಿಡಿಸಿದ ಮೇಲೆ ಮೂಕನಾಗಿದ್ದ ಅವನು ಮಾತನಾಡುವವನಾದನು. ಅದಕ್ಕೆ ಜನರು, “ಇಸ್ರಾಯೇಲಿನಲ್ಲಿ ಇಂಥ ಕಾರ್ಯವನ್ನು ಇದುವರೆಗೂ ಯಾರೂ ನೋಡಲಿಲ್ಲವೆಂದು” ಆಶ್ಚರ್ಯಚಕಿತರಾದರು.
Kannada BSI Bible 2016
ಮತ್ತು ದೆವ್ವವು ಹೊರಗೆ ಹಾಕಲ್ಪಟ್ಟ ಮೇಲೆ ಮೂಕನು ಮಾತಾಡಿದನು; ಆಗ ಜನಸಮೂಹಗಳವರು ಬೆರ ಗಾಗಿ--ಇಂಥದ್ದು ಎಂದೂ ಇಸ್ರಾಯೇಲಿನಲ್ಲಿ ಕಂಡಿಲ್ಲ ಎಂದು ಹೇಳಿದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆತನು ದೆವ್ವಬಿಡಿಸಿದ ಮೇಲೆ ಆ ಮೂಕನು ಮಾತಾಡುವವನಾದನು. ಅದಕ್ಕೆ ಆ ಜನರು - ಇಸ್ರಾಯೇಲ್ ಜನರಲ್ಲಿ ಇಂಥ ಕಾರ್ಯವನ್ನು ಇದುವರೆಗೆ ಯಾರೂ ನೋಡಲಿಲ್ಲವೆಂದು ಬೆರಗಾದರು.
Kannada Bible (KNCL) BSI 2016
ದೆವ್ವ ಬಿಡಿಸಿದ ಮೇಲೆ ಆ ಮೂಕನಿಗೆ ಮಾತು ಬಂದಿತು. ಜನರೆಲ್ಲರೂ ಆಶ್ಚರ್ಯಚಕಿತರಾದರು. “ಇಂತಹ ಕಾರ್ಯವನ್ನು ನಾವು ಇಸ್ರಯೇಲಿನಲ್ಲಿ ಕಂಡದ್ದೇ ಇಲ್ಲ!” ಎಂದುಕೊಂಡರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ದೆವ್ವ ಬಿಡಿಸಿದ ಮೇಲೆ, ಆ ಮೂಕನು ಮಾತನಾಡಿದನು. ಜನರು ಆಶ್ಚರ್ಯಪಟ್ಟು, “ಇಂಥದ್ದನ್ನು ಎಂದೂ ಇಸ್ರಾಯೇಲಿನಲ್ಲಿ ಕಂಡಿಲ್ಲ,” ಎಂದು ಹೇಳಿದರು.