Matthew 9:35 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯೇಸು ಊರುಗಳಲ್ಲೆಲ್ಲಾ ಮತ್ತು ಹಳ್ಳಿಗಳಲ್ಲೆಲ್ಲಾ ಸಂಚಾರ ಮಾಡಿದನು. ಯೇಸು ಅವರ ಸಭಾಮಂದಿರಗಳಲ್ಲಿ ಉಪದೇಶಿಸಿ ಪರಲೋಕರಾಜ್ಯದ ವಿಷಯವಾಗಿ ಶುಭವಾರ್ತೆಯನ್ನು ಹೇಳಿದನು. ಎಲ್ಲಾ ತರದ ರೋಗಗಳನ್ನು ಬೇನೆಗಳನ್ನು ವಾಸಿಮಾಡಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ತರುವಾಯ ಯೇಸು ಎಲ್ಲಾ ಪಟ್ಟಣಗಳಲ್ಲೂ ಹಳ್ಳಿಗಳಲ್ಲೂ ಸಂಚರಿಸುತ್ತಾ ಅವರ ಸಭಾಮಂದಿರಗಳಲ್ಲಿ ಉಪದೇಶಮಾಡುತ್ತಾ ರಾಜ್ಯದ ಸುವಾರ್ತೆಯನ್ನು ಸಾರಿ ಹೇಳುತ್ತಾ ಎಲ್ಲಾ ತರದ ರೋಗಗಳನ್ನೂ ಎಲ್ಲಾ ತರದ ಬೇನೆಗಳನ್ನೂ ವಾಸಿಮಾಡುತ್ತಾ ಬಂದನು.
Kannada BSI Bible 2016
ತರುವಾಯ ಯೇಸು ಎಲ್ಲಾ ಹಳ್ಳಿಗಳಲ್ಲಿಯೂ ಪಟ್ಟಣಗಳಲ್ಲಿಯೂ ಸಂಚರಿ ಸುತ್ತಾ ಅವರ ಸಭಾಮಂದಿರಗಳಲ್ಲಿ ಉಪದೇಶಿಸುತಾ ರಾಜ್ಯದ ಸುವಾರ್ತೆಯನ್ನು ಸಾರುತ್ತಾ ಜನರಲ್ಲಿದ್ದ ಪ್ರತಿಯೊಂದು ಅಸ್ವಸ್ಥತೆಯನ್ನೂ ರೋಗವನ್ನೂ ವಾಸಿಮಾಡಿದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೇಸು ಎಲ್ಲಾ ಊರುಗಳನ್ನೂ ಹಳ್ಳಿಪಳ್ಳಿಗಳನ್ನೂ ಸುತ್ತಿಕೊಂಡು ಅವರ ಸಭಾಮಂದಿರಗಳಲ್ಲಿ ಉಪದೇಶಮಾಡುತ್ತಾ ಪರಲೋಕರಾಜ್ಯದ ಸುವಾರ್ತೆಯನ್ನು ಸಾರಿ ಹೇಳುತ್ತಾ ಎಲ್ಲಾ ತರದ ರೋಗಗಳನ್ನೂ ಎಲ್ಲಾ ತರದ ಬೇನೆಗಳನ್ನೂ ವಾಸಿಮಾಡುತ್ತಾ ಬಂದನು.
Kannada Bible (KNCL) BSI 2016
ಯೇಸುಸ್ವಾಮಿ, ಊರೂರುಗಳಲ್ಲೂ ಹಳ್ಳಿಹಳ್ಳಿಗಳಲ್ಲೂ ಸಂಚಾರ ಮಾಡುತ್ತಾ ಅಲ್ಲಿಯ ಪ್ರಾರ್ಥನಾಮಂದಿರಗಳಲ್ಲಿ ಬೋಧಿಸಿದರು. ಶ್ರೀಸಾಮ್ರಾಜ್ಯದ ಶುಭಸಂದೇಶವನ್ನು ಸಾರಿದರು. ಎಲ್ಲಾತರದ ರೋಗರುಜಿನಗಳನ್ನು ಗುಣಪಡಿಸಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೇಸು ಎಲ್ಲಾ ಹಳ್ಳಿಗಳಲ್ಲಿಯೂ ಪಟ್ಟಣಗಳಲ್ಲಿಯೂ ಇದ್ದ ಸಭಾಮಂದಿರಗಳಲ್ಲಿ ಬೋಧಿಸುತ್ತಾ, ರಾಜ್ಯದ ಸುವಾರ್ತೆಯನ್ನು ಸಾರುತ್ತಾ, ಜನರ ಪ್ರತಿಯೊಂದು ವ್ಯಾಧಿಯನ್ನೂ ರೋಗವನ್ನೂ ಗುಣಪಡಿಸುತ್ತಾ ಸಂಚರಿಸಿದರು.