Matthew 9:36 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನೋವಿನಿಂದ ನರಳುತ್ತಿದ್ದ ಮತ್ತು ಅಸಹಾಯಕರಾಗಿದ್ದ ಅನೇಕ ಜನರನ್ನು ಯೇಸು ನೋಡಿ ದುಃಖಪಟ್ಟನು. ಕುರುಬನಿಲ್ಲದ ಕುರಿಗಳಂತೆ ಅವರಿದ್ದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೇಸು ಜನರ ಗುಂಪುಗಳನ್ನು ನೋಡಿ ಅವರು ಕುರುಬನಿಲ್ಲದ ಕುರಿಗಳ ಹಾಗೆ ಚದುರಿರುವುದನ್ನು ಕಂಡು ಅವರ ಮೇಲೆ ಕನಿಕರಪಟ್ಟನು.
Kannada BSI Bible 2016
ಆದರೆ ಆತನು ಜನರ ಸಮೂಹಗಳನ್ನು ಕಂಡು ಅವರ ಮೇಲೆ ಕನಿಕರಪಟ್ಟನು; ಯಾಕಂದರೆ ಅವರು ಕುರುಬನಿಲ್ಲದ ಕುರಿಗಳಂತೆ ಚದರಿಸಲ್ಪಟ್ಟು ಬಳಲಿದವರಾಗಿದ್ದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆದರೆ ಜನರ ಗುಂಪುಗಳನ್ನು ನೋಡಿ ಅವರು ಕುರುಬನಿಲ್ಲದ ಕುರಿಗಳ ಹಾಗೆ ತೊಳಲಿ ಬಳಲಿ ಹೋಗಿದ್ದಾರಲ್ಲ ಎಂದು ಅವರ ಮೇಲೆ ಕನಿಕರಪಟ್ಟನು.
Kannada Bible (KNCL) BSI 2016
ಆ ಜನಸಮೂಹವನ್ನು ಕಂಡಾಗ ಅವರ ಮನ ಕರಗಿತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಜನಸಮೂಹವೂ ಕುರುಬನಿಲ್ಲದ ಕುರಿಗಳಂತೆ ಅಲೆಯುವವರಾಗಿಯೂ ನಿಸ್ಸಹಾಯಕರಾಗಿಯೂ ಇರುವುದನ್ನು ಕಂಡು ಯೇಸು ಅವರ ಮೇಲೆ ಕನಿಕರಪಟ್ಟರು.