Matthew 9:38 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಬೆಳೆಯ ಯಜಮಾನ ದೇವರೇ. ಆದ್ದರಿಂದ ಹೆಚ್ಚು ಕೆಲಸಗಾರರನ್ನು ಸುಗ್ಗಿಗಾಗಿ ಕಳುಹಿಸಿಕೊಡುವಂತೆ ಆತನಿಗೆ ಪ್ರಾರ್ಥನೆ ಮಾಡಿರಿ” ಎಂದು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದುದರಿಂದ ಬೆಳೆಯ ಯಜಮಾನನನ್ನು, ನಿನ್ನ ಬೆಳೆಗೆ ಕೆಲಸದವರನ್ನು ಕಳುಹಿಸಿಕೊಡಬೇಕೆಂದು ಬೇಡಿಕೊಳ್ಳಿರಿ” ಎಂದು ಹೇಳಿದನು.
Kannada BSI Bible 2016
ಆದದರಿಂದ ಬೆಳೆಯ ಯಜ ಮಾನನು ಕೆಲಸಗಾರರನ್ನು ತನ್ನ ಬೆಳೆಗೆ ಕಳುಹಿಸುವಂತೆ ಆತನನ್ನು ಪ್ರಾರ್ಥಿಸಿರಿ ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆದದರಿಂದ ಬೆಳೆಯ ಯಜಮಾನನನ್ನು - ನಿನ್ನ ಬೆಳೆಗೆ ಕೆಲಸದವರನ್ನು ಕಳುಹಿಸಬೇಕೆಂದು ಬೇಡಿಕೊಳ್ಳಿರಿ ಎಂದು ಹೇಳಿದನು.
Kannada Bible (KNCL) BSI 2016
ಆದುದರಿಂದ ಯೇಸು ತಮ್ಮ ಶಿಷ್ಯರಿಗೆ, “ಬೆಳೆಯೇನೋ ಹೇರಳ; ಕೊಯಿಲುಗಾರರೋ ವಿರಳ; ಈ ಕಾರಣ ತನ್ನ ಕೊಯಿಲಿಗೆ ಆಳುಗಳನ್ನು ಕಳುಹಿಸುವಂತೆ ಬೆಳೆಯ ಯಜಮಾನನನ್ನು ಪ್ರಾರ್ಥಿಸಿರಿ,” ಎಂದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದ್ದರಿಂದ, ಬೆಳೆಯ ಯಜಮಾನನನ್ನು ತನ್ನ ಬೆಳೆಗೆ ತಕ್ಕಷ್ಟು ಕೆಲಸದವರನ್ನು ಕಳುಹಿಸುವಂತೆ, ನೀವು ಬೇಡಿಕೊಳ್ಳಿರಿ,” ಎಂದರು.