Matthew 9:4 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅವರು ಹೀಗೆ ಆಲೋಚಿಸುತ್ತಿರುವುದು ಯೇಸುವಿಗೆ ತಿಳಿದಿತ್ತು. ಆತನು ಅವರಿಗೆ, “ನೀವು ಏಕೆ ದುರಾಲೋಚನೆ ಮಾಡುತ್ತಿದ್ದೀರಿ?
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೇಸು ಅವರ ಆಲೋಚನೆಗಳನ್ನು ತಿಳಿದು, “ನೀವು ಏಕೆ ನಿಮ್ಮ ಮನಸ್ಸಿನಲ್ಲಿ ದುರಾಲೋಚನೆಯನ್ನು ಮಾಡುತ್ತಿದ್ದೀರಿ?
Kannada BSI Bible 2016
ಯೇಸು ಅವರ ಆಲೋಚನೆಗಳನ್ನು ತಿಳಿದು--ನೀವು ಯಾಕೆ ನಿಮ್ಮ ಹೃದಯಗಳಲ್ಲಿ ಕೆಟ್ಟದ್ದನ್ನು ಯೋಚಿಸುತ್ತೀರಿ?
Kannada BSI JV (ಕನ್ನಡ ಸತ್ಯವೇದವು J.V. (BSI))
ಯೇಸು ಅವರ ಆಲೋಚನೆಯನ್ನು ತಿಳಿದು - ನೀವು ಯಾಕೆ ನಿಮ್ಮ ಮನಸ್ಸಿನಲ್ಲಿ ಕೆಟ್ಟ ಆಲೋಚನೆಯನ್ನು ಮಾಡುತ್ತೀರಿ?
Kannada Bible (KNCL) BSI 2016
ಯೇಸು ಅವರ ಆಲೋಚನೆಗಳನ್ನು ಅರಿತುಕೊಂಡು, “ನೀವು ಮನಸ್ಸಿನಲ್ಲೇಕೆ ದುರಾಲೋಚನೆ ಮಾಡುತ್ತಿದ್ದೀರಿ?
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೇಸು ಅವರ ಆಲೋಚನೆಗಳನ್ನು ತಿಳಿದುಕೊಂಡು, “ನೀವು ನಿಮ್ಮ ಮನಸ್ಸಿನಲ್ಲಿ ಕೆಟ್ಟದ್ದನ್ನು ಯೋಚಿಸುವುದೇಕೆ?