Matthew 9:6 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆದರೆ ಮನುಷ್ಯಕುಮಾರನಿಗೆ ಪಾಪಗಳನ್ನು ಕ್ಷಮಿಸಲು ಭೂಲೋಕದಲ್ಲಿ ಅಧಿಕಾರವಿದೆ ಎಂಬುದನ್ನು ನಾನು ನಿಮಗೆ ನಿರೂಪಿಸುತ್ತೇನೆ” ಎಂದನು. ನಂತರ ಯೇಸು ಪಾರ್ಶ್ವವಾಯು ರೋಗಿಗೆ, “ಎದ್ದು, ನಿನ್ನ ಹಾಸಿಗೆಯನ್ನು ತೆಗೆದುಕೊಂಡು ಮನೆಗೆ ಹೋಗು” ಎಂದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅಥವಾ ‘ಎದ್ದು ನಡೆ’ ಅನ್ನುವದೋ? ಆದರೆ ಪಾಪಗಳನ್ನು ಕ್ಷಮಿಸಿಬಿಡುವುದಕ್ಕೆ ಮನುಷ್ಯಕುಮಾರನಿಗೆ ಭೂಲೋಕದಲ್ಲಿ ಅಧಿಕಾರ ಉಂಟೆಂಬುದು ನಿಮಗೆ ತಿಳಿಯಬೇಕು” ಎಂದು ಹೇಳಿ ಪಾರ್ಶ್ವವಾಯು ರೋಗಿಗೆ, “ಎದ್ದು ನಿನ್ನ ಹಾಸಿಗೆಯನ್ನು ಎತ್ತಿಕೊಂಡು ಮನೆಗೆ ಹೋಗು” ಅಂದನು.
Kannada BSI Bible 2016
ಆದರೆ ಮನುಷ್ಯಕುಮಾರನಿಗೆ ಪಾಪ ಗಳನ್ನು ಕ್ಷಮಿಸಿಬಿಡುವದಕ್ಕೆ ಭೂಮಿಯ ಮೇಲೆ ಅಧಿಕಾರ ಉಂಟೆಂದು ನೀವು ತಿಳಿಯಬೇಕು ಎಂದು ಹೇಳಿ ಆ ಪಾರ್ಶ್ವವಾಯು ರೋಗಿಗೆ--ಎದ್ದು ನಿನ್ನ ಹಾಸಿಗೆಯನ್ನು ಎತ್ತಿಕೊಂಡು ನಿನ್ನ ಮನೆಗೆ ಹೋಗು ಎಂದು ಹೇಳಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆದರೆ ಪಾಪಗಳನ್ನು ಕ್ಷವಿುಸಿಬಿಡುವದಕ್ಕೆ ಮನುಷ್ಯಕುಮಾರನಿಗೆ ಭೂಲೋಕದಲ್ಲಿ ಅಧಿಕಾರ ಉಂಟೆಂಬದು ನಿಮಗೆ ತಿಳಿಯಬೇಕು ಎಂದು ಹೇಳಿ ಪಾರ್ಶ್ವವಾಯುರೋಗಿಯನ್ನು ನೋಡಿ - ಎದ್ದು ನಿನ್ನ ಹಾಸಿಗೆಯನ್ನು ಎತ್ತಿಕೊಂಡು ಮನೆಗೆ ಹೋಗು ಅಂದನು.
Kannada Bible (KNCL) BSI 2016
ಭೂಲೋಕದಲ್ಲಿ ಪಾಪಗಳನ್ನು ಕ್ಷಮಿಸಲು ನರಪುತ್ರನಿಗೆ ಅಧಿಕಾರ ಉಂಟೆಂದು ಈ ಮೂಲಕ ನಿಮಗೆ ಖಚಿತವಾಗಬೇಕು,” ಎಂದು ಹೇಳಿ, ಆ ಪಾರ್ಶ್ವವಾಯು ರೋಗಿಯನ್ನು ನೋಡಿ, “ಎದ್ದೇಳು, ನಿನ್ನ ಹಾಸಿಗೆಯನ್ನು ಎತ್ತಿಕೊಂಡು ಮನೆಗೆ ಹೋಗು” ಎಂದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ ಮನುಷ್ಯಪುತ್ರನಾದ ನನಗೆ ಈ ಭೂಲೋಕದಲ್ಲಿ ಪಾಪಗಳನ್ನು ಕ್ಷಮಿಸುವುದಕ್ಕೆ ಅಧಿಕಾರವುಂಟೆಂದು ನೀವು ತಿಳಿಯಬೇಕು,” ಎಂದು ಹೇಳಿ ಆ ಪಾರ್ಶ್ವವಾಯು ರೋಗಿಗೆ, “ಎದ್ದು ನಿನ್ನ ಹಾಸಿಗೆಯನ್ನು ಎತ್ತಿಕೊಂಡು ಮನೆಗೆ ಹೋಗು ಎಂದು ನಾನು ನಿನಗೆ ಹೇಳುತ್ತೇನೆ,” ಎಂದರು.