Micah 1:11 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಶಾಫೀರ್‌ನಲ್ಲಿ ವಾಸಿಸುವವರೇ, ಬೆತ್ತಲೆಯಾಗಿ ನಾಚಿಕೆಯಿಂದ ನಡೆಯಿರಿ. ಚಾನಾನ್‌ನಲ್ಲಿ ವಾಸಿಸುವವರು ಹೊರಗೆ ಬರುವದಿಲ್ಲ. ಬೇತೇಚೆಲಿನ ಜನರು ಅಳುವರು, ನಿಮಗೆ ಅವರು ನೀಡುತ್ತಿದ್ದ ಬೆಂಬಲವನ್ನು ಹಿಂತೆಗೆದುಕೊಳ್ಳುವರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಶಾಫೀರಿನವರೇ, ಬೆತ್ತಲೆಯಾಗಿ ಅವಮಾನಪಟ್ಟು ತೊಲಗಿರಿ. ಚಾನಾನಿನವರು ಹೊರಡರು. ಬೇತೆಚೇಲಿನ ಗೋಳಾಟವು ಅದರ ಬೆಂಬಲವನ್ನು ನಿಮಗೆ ತಪ್ಪಿಸುವುದು.
Kannada BSI Bible 2016
ಶಾಫೀರಿನ ನಿವಾಸಿಯೇ, ನಾಚಿಕೆ ಮುಚ್ಚದೆ ಹಾದುಹೋಗು; ಬೇತೇಚೆಲಿನ ಗೋಳಾಟದಲ್ಲಿ ಚಾನಾನಿನ ನಿವಾಸಿ ಮುಂದೆ ಬರಲಿಲ್ಲ; ಅವನು ನಿಮ್ಮಿಂದ ತನ್ನ ಸ್ಥಾನವನ್ನು ತಕ್ಕೊಳ್ಳುವನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಶಾಫೀರಿನವರೇ, ಬೆತ್ತಲೆಯಾಗಿ ಅವಮಾನಪಟ್ಟು ತೊಲಗಿರಿ; ಚಾನಾನಿನವರು ಹೊರಡರು; ಬೇತೇಚೆಲಿನ ಗೋಳಾಟವು ಅದರ ಬೆಂಬಲವನ್ನು ನಿಮಗೆ ತಪ್ಪಿಸುವದು.
Kannada Bible (KNCL) BSI 2016
ಶಾಫೀರಿನವರೇ, ಬೆತ್ತಲೆಯಾಗಿ ಲಜ್ಜೆಗೆಟ್ಟು ತೊಲಗಿರಿ. ಚಾನಾನಿನವರಿಗೆ ಹೊರಬರಲು ಧೈರ್ಯವಿಲ್ಲ. ಬೇತೇಲಿನವರ ಗೋಳಾಟ ಕೇಳಿಬಂದಾಗ, ಅಲ್ಲಿ ನಿಮಗೆ ಆಶ್ರಯವಿಲ್ಲವೆಂದು ಗೊತ್ತಾಗುವುದು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಶಾಫೀರಿನ ನಿವಾಸಿಯೇ, ನಗ್ನತೆಯಿಂದಲೂ ನಾಚಿಕೆಯಿಂದಲೂ ಹಾದುಹೋಗಿರಿ, ಚಾನಾನಿನಲ್ಲಿ ವಾಸಿಸುವವರು ಹೊರಗೆ ಬರುವುದಿಲ್ಲ, ಬೇತ್ ಎಚೆಲು ನರಳುತ್ತಿದೆ. ಅದು ಇನ್ನು ಮುಂದೆ ನಿಮ್ಮನ್ನು ರಕ್ಷಿಸುವುದಿಲ್ಲ.