Micah 1:13 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಲಾಕೀಷಿನ ಸ್ತ್ರೀಯೇ, ವೇಗವಾಗಿ ಓಡುವ ಕುದುರೆಯನ್ನು ನಿನ್ನ ಬಂಡಿಗೆ ಬಿಗಿ. ಚೀಯೋನಿನ ಪಾಪವು ಲಾಕೀಷಿನಲ್ಲಿ ಪ್ರಾರಂಭವಾಯಿತು. ಯಾಕೆಂದರೆ ನೀನು ಇಸ್ರೇಲಿನ ಪಾಪವನ್ನು ಅನುಸರಿಸಿದಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಲಾಕೀಷಿನವರೇ ಅಶ್ವಗಳನ್ನು ರಥಕ್ಕೆ ಕಟ್ಟಿರಿ. ನಿಮ್ಮ ಊರೇ ಚೀಯೋನ್ ನಗರಿಯ ಪಾಪಕ್ಕೆ ಮೂಲ, ಹೌದು ಇಸ್ರಾಯೇಲಿನ ದ್ರೋಹಗಳು ನಿಮ್ಮಲ್ಲಿಯೇ ಹುಟ್ಟಿಬಂದವು.
Kannada BSI Bible 2016
ಲಾಕೀಷಿನ ನಿವಾಸಿಯೇ, ವೇಗವುಳ್ಳ ಕುದುರೆಗೆ ರಥವನ್ನು ಕಟ್ಟು, ಇದೇ ಚೀಯೋನಿನ ಮಗಳ ಪಾಪದ ಆರಂಭವು; ಇಸ್ರಾಯೇಲಿನ ಅಪರಾಧಗಳು ನಿನ್ನಲ್ಲಿ ಕಂಡುಬಂದವು.
Kannada BSI JV (ಕನ್ನಡ ಸತ್ಯವೇದವು J.V. (BSI))
ಲಾಕೀಷಿನವರೇ, ಅಶ್ವಗಳನ್ನು ರಥಕ್ಕೆ ಕಟ್ಟಿರಿ; ನಿಮ್ಮ ಊರೇ ಚೀಯೋನ್ ನಗರಿಯ ಪಾಪಕ್ಕೆ ಮೂಲ; ಹೌದು, ಇಸ್ರಾಯೇಲಿನ ದ್ರೋಹಗಳು ನಿಮ್ಮಲ್ಲಿಯೇ ಹುಟ್ಟಿಬಂದವು.
Kannada Bible (KNCL) BSI 2016
ಲಾಕೀಷಿನ ನಿವಾಸಿಗಳೇ, ನಿಮ್ಮ ಕುದುರೆಗಳನ್ನು ರಥಕ್ಕೆ ಹೂಡಿರಿ. ನಿಮ್ಮ ಊರೇ ಸಿಯೋನ್ ನಗರದ ಪಾಪಕ್ಕೆ ಮೂಲ ಕಾರಣ. ಹೌದು, ಇಸ್ರಯೇಲಿನ ದ್ರೋಹಗಳು ನಿಮ್ಮಲ್ಲಿಯೇ ಕಾಣಿಸಿಕೊಂಡವು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಲಾಕೀಷಿನ ನಿವಾಸಿಗಳೇ, ಕುದುರೆಗಳನ್ನು ರಥಕ್ಕೆ ಕಟ್ಟಿರಿ, ಚೀಯೋನ್ ಮಗಳ ಪಾಪವು ನಿನ್ನಿಂದ ಪ್ರಾರಂಭವಾಯಿತು ಇಸ್ರಾಯೇಲಿನ ದ್ರೋಹಗಳು ನಿಮ್ಮಲ್ಲಿಯೇ ಹುಟ್ಟಿ ಬಂದವು.