Micah 1:16 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನಿನ್ನ ಕೂದಲನ್ನು ಬೋಳಿಸು; ಯಾಕೆಂದರೆ ನೀನು ಪ್ರೀತಿಸುವ ಮಕ್ಕಳಿಗಾಗಿ ನೀನು ಅಳುವೆ. ಗಿಡುಗನಂತೆ ನಿನ್ನ ತಲೆ ಬೋಳಾಗಲಿ. ನಿನ್ನ ದುಃಖವನ್ನು ಪ್ರದರ್ಶಿಸು. ಯಾಕೆಂದರೆ ನಿನ್ನ ಮಕ್ಕಳು ನಿನ್ನಿಂದ ತೆಗೆಯಲ್ಪಡುವರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೆಹೂದವೇ, ನಿನ್ನಿಂದ ಸೆರೆಹೋಗಿರುವ ನಿನ್ನ ಮುದ್ದು ಮಕ್ಕಳಿಗಾಗಿ ಕ್ಷೌರಮಾಡಿಸಿಕೋ ಮತ್ತು ತಲೆಬೋಳಿಸಿಕೋ. ನಿನ್ನ ಬೋಳುತನವನ್ನು ರಣಹದ್ದಿನ ಹಾಗೆ ವಿಸ್ತರಿಸಿಕೋ.
Kannada BSI Bible 2016
ನಿನ್ನ ಮುದ್ದು ಮಕ್ಕಳಿಗೋಸ್ಕರ ತಲೆಬೋಳಿಸಿಕೊಂಡು ಕ್ಷೌರ ಮಾಡಿಸಿಕೊ; ಹದ್ದಿನಂತೆ ನಿನ್ನ ಬೋಳುತನವನ್ನು ಅಗಲ ಮಾಡಿಕೊ; ಅವರು ನಿನ್ನನ್ನು ಬಿಟ್ಟು ಸೆರೆಯಾಗಿ ಹೋಗಿದ್ದಾರೆ.
Kannada BSI JV (ಕನ್ನಡ ಸತ್ಯವೇದವು J.V. (BSI))
[ಯೆಹೂದವೇ,] ನಿನ್ನ ಮುದ್ದು ಮಕ್ಕಳಿಗಾಗಿ ಕ್ಷೌರಮಾಡಿಸಿಕೋ, ತಲೆಬೋಳಿಸಿಕೋ; ನಿನ್ನ ಬೋಳುತನವನ್ನು ರಣಹದ್ದಿನ ಹಾಗೆ ವಿಸ್ತರಿಸಿಕೋ; ಅವರು ನಿನ್ನ ಕಡೆಯಿಂದ ಸೆರೆಹೋಗಿದ್ದಾರಲ್ಲಾ!
Kannada Bible (KNCL) BSI 2016
ಜುದೇಯದ ನಿವಾಸಿಗಳೇ, ನಿಮ್ಮ ಮಕ್ಕಳು ಅಗಲಿ ಸೆರೆಹೋಗಿದ್ದಾರೆ. ನಿಮ್ಮ ಮುದ್ದು ಮಕ್ಕಳಿಗಾಗಿ ತಲೆಬೋಳಿಸಿಕೊಳ್ಳಿ, ಮುಂಡನ ಮಾಡಿಸಿಕೊಳ್ಳಿ. ನಿಮ್ಮ ಬೋಳುತಲೆಯು ರಣಹದ್ದಿನಂತೆ ನುಣ್ಣಗಿರಲಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಿನ್ನ ಮುದ್ದುಮಕ್ಕಳಿಗೋಸ್ಕರ ತಲೆ ಬೋಳಿಸಿಕೊಂಡು ಕ್ಷೌರಮಾಡಿಸಿಕೋ. ನಿನ್ನ ಬೋಳುತನವನ್ನು ಹದ್ದಿನಂತೆ ಮಾಡಿಕೋ. ಏಕೆಂದರೆ ಅವರು ನಿನ್ನನ್ನು ಬಿಟ್ಟು ಸೆರೆಯಾಗಿ ಹೋಗುವರು.