Micah 1:3 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯೆಹೋವನು ತನ್ನ ಸ್ಥಳದಿಂದ ಹೊರಟು ಬರುವುದನ್ನು ನೋಡಿರಿ. ಆತನು ಲೋಕದ ಬೆಟ್ಟಗಳ ಮೇಲೆ ನಡೆಯಲು ಬರುತ್ತಿದ್ದಾನೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇಗೋ ಯೆಹೋವನು ತನ್ನ ಸ್ಥಾನದಿಂದ ಹೊರಟು ಇಳಿದುಬರುತ್ತಿದ್ದಾನೆ. ಭೂಮಿಯ ಉನ್ನತಪ್ರದೇಶಗಳಲ್ಲಿ ನಡೆಯುತ್ತಾನೆ.
Kannada BSI Bible 2016
ಇಗೋ, ಕರ್ತನು ತನ್ನ ಸ್ಥಾನದಿಂದ ಹೊರಡುತ್ತಾನೆ; ಆತನು ಇಳಿದು ಭೂಮಿಯ ಉನ್ನತವಾದ ಸ್ಥಳಗಳ ಮೇಲೆ ತುಳಿಯುವನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಇಗೋ, ಯೆಹೋವನು ತನ್ನ ಸ್ಥಾನದಿಂದ ಹೊರಟು ಇಳಿದುಬರುತ್ತಿದ್ದಾನೆ, ಭೂವಿುಯ ಉನ್ನತಪ್ರದೇಶಗಳಲ್ಲಿ ನಡೆಯುತ್ತಾನೆ.
Kannada Bible (KNCL) BSI 2016
ಸಾಕ್ಷಿ ನುಡಿದಿಹನು ನಿಮ್ಮ ವಿರುದ್ಧ ಸರ್ವೇಶ್ವರ ಪವಿತ್ರಾಲಯದಿಂದ ಇಳಿದುಬರುತಿಹನಿದೋ ಸ್ವಾಮಿ ತನ್ನ ಆಸ್ಥಾನದಿಂದ ಜಗದ ಉನ್ನತ ಪ್ರದೇಶಗಳಲ್ಲಿ ಸಂಚರಿಸಲಿಹನಾತ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೆಹೋವ ದೇವರು ತಮ್ಮ ವಾಸಸ್ಥಾನದಿಂದ ಇಳಿದು ಬರುತ್ತಾರೆ. ಅವರು ಇಳಿದು ಭೂಮಿಯ ಉನ್ನತವಾದ ಸ್ಥಳಗಳ ಮೇಲೆ ಸಂಚರಿಸುತ್ತಾರೆ.