Micah 1:4 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಬೆಂಕಿಯಲ್ಲಿ ಮೇಣವು ಕರಗುವಂತೆ ಬೆಟ್ಟಗಳು ಆತನ ಪಾದದಡಿಯಿಂದ ಕರಗಿಹೋಗುತ್ತವೆ. ತಗ್ಗುಗಳು ಇಬ್ಭಾಗವಾಗಿ ನೀರಿನಂತೆ ಕಡಿದಾದ ಸ್ಥಳದಿಂದ ಹರಿದುಹೋಗುತ್ತವೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಬೆಂಕಿಗೆ ಎದುರು ಕರಗುವ ಮೇಣದಂತೆಯೂ ಮತ್ತು ಇಳಿಜಾರು ಪ್ರದೇಶದಲ್ಲಿ ರಭಸವಾಗಿ ಹರಿಯುವ ನೀರಿನಂತೆ ಕಣಿವೆಗಳು, ಪರ್ವತಗಳು ಆತನ ಮುಂದೆ ಸೀಳಿ ಕರಗಿ ಕೊಚ್ಚಿಹೊಗುತ್ತಿವೆ.
Kannada BSI Bible 2016
ಬೆಂಕಿಯ ಮುಂದೆ ಮೇಣದ ಹಾಗೆಯೂ ಇಳಿಜಾರಿನ ಸ್ಥಳದಲ್ಲಿ ಸುರಿಯುವ ನೀರಿನ ಹಾಗೆಯೂ ಬೆಟ್ಟಗಳು ಆತನ ಕೆಳಗೆ ಕರಗುವವು; ತಗ್ಗುಗಳು ಸೀಳುವವು.
Kannada BSI JV (ಕನ್ನಡ ಸತ್ಯವೇದವು J.V. (BSI))
ಬೆಂಕಿಗೆ ಕರಗಿದ ಮೇಣದಂತೆಯೂ ಜರಿಯಲ್ಲಿ ಹೊಯ್ದ ನೀರಿನ ಹಾಗೂ ಪರ್ವತಗಳು ಆತನ ಹೆಜ್ಜೆಗೆ ಕರಗಿ ಹರಿಯುತ್ತವೆ, ತಗ್ಗುಗಳು ಸೀಳಿಹೋಗುತ್ತವೆ.
Kannada Bible (KNCL) BSI 2016
ಬೆಂಕಿಗೆ ಕರಗುವ ಮೇಣದಂತೆ ಇಳಿಜಾರು ಪ್ರದೇಶದ ನೀರು ನೆಲವನ್ನು ಕೊರೆವಂತೆ ಕರಗಿಹೋಗುವುವು ಆತನ ಪಾದದಡಿ ಪರ್ವತಗಳು; ಸೀಳಿಹೋಗುವುವು ಕೊಲ್ಲಿಗಳು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಬೆಂಕಿಯ ಮುಂದೆ ಮೇಣದ ಹಾಗೆಯೂ ಇಳಿಜಾರಿನ ಸ್ಥಳದಲ್ಲಿ ರಭಸವಾಗಿ ಹರಿಯುವ ನೀರಿನ ಹಾಗೆಯೂ ಬೆಟ್ಟಗಳು ಆತನ ಕೆಳಗೆ ಕರಗುವುವು; ತಗ್ಗುಗಳು ಸೀಳುವುವು.