Micah 1:7 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆಕೆಯ ವಿಗ್ರಹಗಳೆಲ್ಲಾ ಒಡೆದು ಪುಡಿಮಾಡಲ್ಪಡುವವು. ಆಕೆಯ ಸೂಳೆತನದ ಹಣವು ಬೆಂಕಿಯಲ್ಲಿ ಸುಡಲ್ಪಡುವುದು. ಆಕೆಯ ಸುಳ್ಳುದೇವರ ವಿಗ್ರಹಗಳನ್ನೆಲ್ಲಾ ನಾಶಮಾಡುವೆನು. ಯಾಕೆಂದರೆ ಸಮಾರ್ಯ ನನಗೆ ಅಪನಂಬಿಗಸ್ತಳಾಗಿ ಧನಿಕಳಾದಳು. ನನಗೆ ನಂಬಿಗಸ್ತರಲ್ಲದವರು ಆಕೆಯಿಂದ ಅದನ್ನು ಕಸಿದುಕೊಳ್ಳುವರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅದರ ಎರಕದ ಬೊಂಬೆಗಳನ್ನೆಲ್ಲಾ ಪುಡಿಪುಡಿ ಮಾಡುವೆನು. ಅದರ ಸಮಸ್ತ ಸಂಪಾದನೆಯು ಸುಟ್ಟುಹೋಗುವುದು. ಅದರ ಸಕಲ ವಿಗ್ರಹಗಳನ್ನು ಹಾಳುಮಾಡುವೆನು. ಅದು ವೇಶ್ಯಾವಾಟಿಕೆಯಿಂದ ಸಂಪಾದನೆಯಾಗಿ ಕೂಡಿಸಿಟ್ಟುಕೊಂಡವುಗಳು ಹಾಗೂ ವೇಶ್ಯಾವಾಟಿಕೆಯ ಸಂಪಾದನೆಯಾಗಿಯೇ ಪರರ ಪಾಲಾಗುವವು.
Kannada BSI Bible 2016
ಅದರ ಕೆತ್ತಿದ ವಿಗ್ರಹಗಳೆಲ್ಲಾ ತುಂಡು ಗಳಾಗುವಂತೆ ಒಡೆಯಲ್ಪಡುವವು. ಅದಕ್ಕೆ ಆದ ಸಂಪಾದನೆಗಳೆಲ್ಲಾ ಬೆಂಕಿಯಿಂದ ಸುಡಲ್ಪಡುವವು; ಅದರ ವಿಗ್ರಹಗಳನ್ನೆಲ್ಲಾ ಹಾಳುಮಾಡುವೆನು; ಸೂಳೆಯ ಕೂಲಿಯಿಂದ ಅವುಗಳನ್ನು ಕೂಡಿಸಿ ಕೊಂಡಿತು, ಸೂಳೆಯ ಕೂಲಿಗೆ ಅವು ತಿರುಗುವವು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅದರ ಎರಕದ ಬೊಂಬೆಗಳೆಲ್ಲಾ ಒಡೆಯಲ್ಪಡುವವು; ಅದರ ಸಮಸ್ತ ಸಂಪಾದನೆಯು ಸುಟ್ಟುಹೋಗುವದು, ಅದರ ಸಕಲ ವಿಗ್ರಹಗಳನ್ನು ಹಾಳುಮಾಡುವೆನು; ಅದು ಸೂಳೆತನದ ಸಂಪಾದನೆಯಾಗಿ ಕೂಡಿಸಿಟ್ಟುಕೊಂಡವುಗಳು, ಸೂಳೆತನದ ಸಂಪಾದನೆಯಾಗಿಯೇ ಪರರಪಾಲಾಗುವವು.
Kannada Bible (KNCL) BSI 2016
ಅದರಲ್ಲಿನ ಎರಕದ ಪ್ರತಿಮೆಗಳನ್ನು ಪುಡಿಪುಡಿ ಮಾಡುವೆನು. ಅದರ ಸಂಪಾದನೆಯೆಲ್ಲ ಅಗ್ನಿಗೆ ಆಹುತಿಯಾಗುವುದು. ಅದರ ವಿಗ್ರಹಗಳನ್ನೆಲ್ಲ ಹಾಳುಮಾಡುವೆನು. ಅವು ಸೂಳೆತನದಿಂದ ಸಂಪಾದನೆಯಾದುವು, ಸೂಳೆತನದ ಸಂಪಾದನೆಯಾಗಿಯೇ ಪರರ ಪಾಲಾಗುವುದು,” ಎಂದು ಸರ್ವೇಶ್ವರ ಹೇಳುತ್ತಾರೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅದರ ವಿಗ್ರಹಗಳೆಲ್ಲಾ ತುಂಡುಗಳಾಗುವಂತೆ ಮಾಡುವೆನು. ಅದರ ಆಲಯದ ಕಾಣಿಕೆಗಳೆಲ್ಲಾ ಬೆಂಕಿಯಿಂದ ಸುಟ್ಟುಹೋಗುವುದು. ಅದರ ವಿಗ್ರಹಗಳನ್ನೆಲ್ಲಾ ಹಾಳುಮಾಡುವೆನು. ಅದು ವೇಶ್ಯಾವೃತ್ತಿಯ ಕೂಲಿಯಿಂದ ಕೂಡಿಸಿಕೊಂಡವು. ವೇಶ್ಯಾವೃತ್ತಿಯ ಕೂಲಿಯನ್ನಾಗಿಯೇ ಅವುಗಳನ್ನು ಉಪಯೋಗಿಸಬೇಕಾಗುತ್ತದೆ.