Micah 1:8 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಮುಂದೆ ಸಂಭವಿಸುವ ಘಟನೆಗಳ ಬಗ್ಗೆ ನಾನು ಬಹಳ ದುಃಖಿತನಾಗಿದ್ದೇನೆ. ನಾನು ಬಟ್ಟೆಯನ್ನಾಗಲಿ ಚಪ್ಪಲಿಯನ್ನಾಗಲಿ ಹಾಕಿಕೊಳ್ಳದೇ ಹೋಗುವೆನು. ನಾಯಿಯಂತೆ ಅಳುವೆನು, ಪಕ್ಷಿಯಂತೆ ಗೋಳಾಡುವೆನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇದಕ್ಕಾಗಿ ನಾನು ಗೋಳಾಡಿ ರೋದಿಸುವೆನು, ಬರಿಗಾಲಾಗಿಯೂ, ಬೆತ್ತಲೆಯಾಗಿಯೂ ನಡೆದಾಡುವೆನು. ನರಿಗಳಂತೆ ಅರಚಿಕೊಳ್ಳುವೆನು. ಉಷ್ಟ್ರಪಕ್ಷಿಗಳ ಹಾಗೆ ಕಿರಿಚಿಕೊಳ್ಳುವೆನು.
Kannada BSI Bible 2016
ಆದದರಿಂದ ನಾನು ಗೋಳಾಡಿ ಅರಚುವೆನು; ಬರಿಗಾಲಾಗಿಯೂ ಬೆತ್ತಲೆಯಾಗಿಯೂ ಹೋಗುವೆನು; ನರಿಗಳ ಹಾಗೆ ಗೋಳಾಡುವೆನು; ಬಕಪಕ್ಷಿಯಂತೆ ದುಃಖಪಡುವೆನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಇದಕ್ಕಾಗಿ ನಾನು ಅರಿಚಾಟ ಕಿರಿಚಾಟ ಮಾಡುವೆನು; ಬರಿಗಾಲಾಗಿಯೂ ಬೆತ್ತಲೆಯಾಗಿಯೂ ನಡೆಯುವೆನು; ನರಿಗಳಂತೆ ಅರಚಿಕೊಳ್ಳುವೆನು, ಉಷ್ಟ್ರಪಕ್ಷಿಗಳ ಹಾಗೆ ಕಿರಚಿಕೊಳ್ಳುವೆನು.
Kannada Bible (KNCL) BSI 2016
ಆಗ ಮೀಕನು: “ಇದಕ್ಕಾಗಿ ನಾನು ಗೋಳಾಡಿ ರೋದಿಸುವೆನು; ಬೆತ್ತಲೆಯಾಗಿ ಬರಿಗಾಲಿನಲ್ಲಿ ಪಾದಯಾತ್ರೆ ಮಾಡುವೆನು; ಗುಳ್ಳೆನರಿಗಳಂತೆ ಊಳಿಡುವೆನು, ಗೂಬೆಯಂತೆ ಘೂಂಕರಿಸುವೆನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದ್ದರಿಂದ ನಾನು ಗೋಳಾಡಿ ಅರಚುವೆನು. ಬರಿಗಾಲಿನಲ್ಲಿಯೂ ಬೆತ್ತಲೆಯಾಗಿಯೂ ಹೋಗುವೆನು. ನರಿಗಳ ಹಾಗೆ ಕೂಗುವೆನು, ಉಷ್ಟ್ರಪಕ್ಷಿಯಂತೆ ನರಳುವೆನು.