Micah 2:1 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಪಾಪಮಾಡಲು ಯೋಚಿಸುವವರಿಗೆ ಸಂಕಟವು ಒದಗುವದು. ಇವರು ಹಾಸಿಗೆಯ ಮೇಲೆ ಬಿದ್ದುಕೊಂಡು ಪಾಪಮಾಡಲು ಯೋಚಿಸುತ್ತಾರೆ. ಬೆಳಿಗ್ಗೆ ಸೂರ್ಯ ಮೂಡಲು ತಾವು ಯೋಚಿಸಿದ ಪಾಪವನ್ನು ಕಾರ್ಯಗತ ಮಾಡುತ್ತಾರೆ. ಯಾಕೆ? ಯಾಕೆಂದರೆ ಅವರಿಗೆ ತಮ್ಮ ಇಷ್ಟಪ್ರಕಾರ ನಡೆದುಕೊಳ್ಳಲು ಬಲವಿದೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ತಮ್ಮ ಹಾಸಿಗೆಯಲ್ಲಿ ಮಲಗಿರುವಾಗಲೇ ಅನ್ಯಾಯವನ್ನು ಯೋಚಿಸಿ, ಕೇಡನ್ನು ಕಲ್ಪಿಸುವವರ ಗತಿಯನ್ನು ಏನು ಹೇಳಲಿ. ಉದಯದ ಬೆಳಕಿನಲ್ಲಿ ಅದನ್ನು ನಡಿಸುವರು, ಅದು ಅವರ ಕೈವಶವಷ್ಟೇ.
Kannada BSI Bible 2016
ಅಪರಾಧವನ್ನು ಯೋಚಿಸಿ, ತಮ್ಮ ಹಾಸಿಗೆಗಳ ಮೇಲೆ ಕೆಟ್ಟದ್ದನ್ನು ನಡಿಸುವವರಿಗೆ ಅಯ್ಯೋ! ಹೊತ್ತಾರೆ ಬೆಳಕಾಗುವಾಗ ಅದನ್ನು ಮಾಡುತ್ತಾರೆ; ಅದು ಅವರ ಕೈವಶದಲ್ಲಿದೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ತಮ್ಮ ಹಾಸಿಗೆಗಳಲ್ಲೇ ಅನ್ಯಾಯವನ್ನು ಯೋಚಿಸಿ ಕೇಡನ್ನು ಕಲ್ಪಿಸುವವರ ಗತಿಯನ್ನು ಏನು ಹೇಳಲಿ! ಉದಯದ ಬೆಳಕಿನಲ್ಲಿ ಅದನ್ನು ನಡಿಸುವರು, ಅದು ಅವರ ಕೈವಶವಷ್ಟೆ.
Kannada Bible (KNCL) BSI 2016
ತಮ್ಮ ಹಾಸಿಗೆಯಲ್ಲೇ ಕುತಂತ್ರವನ್ನು ಕಲ್ಪಿಸಿಕೊಂಡು ಕೇಡನ್ನು ಬಗೆಯುವವರಿಗೆ ಧಿಕ್ಕಾರ! ಬೆಳಗಾದದ್ದೇ ಅವರು ಕುತಂತ್ರವನ್ನು ಕಾರ್ಯಗತ ಮಾಡುತ್ತಾರೆ. ಆ ಸಾಮರ್ಥ್ಯ ಅವರ ಕೈಯಲ್ಲಿದೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅಪರಾಧವನ್ನು ಯೋಚಿಸಿ ಅಪರಾಧವನ್ನು ಕಲ್ಪಿಸಿ, ತಮ್ಮ ಹಾಸಿಗೆಗಳ ಮೇಲೆ ಕೆಟ್ಟದ್ದನ್ನು ನಡೆಸುವವರಿಗೆ ಕಷ್ಟ! ಹೊತ್ತಾರೆ ಬೆಳಕಾಗುವಾಗ ಅದನ್ನು ಮಾಡುತ್ತಾರೆ. ಏಕೆಂದರೆ ಅದು ಅವರ ಕೈಶಕ್ತಿಯಲ್ಲಿದೆ.