Micah 2:10 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಎದ್ದು ಈ ಸ್ಥಳವನ್ನು ಬಿಟ್ಟುಹೋಗು. ಇದು ನಿನ್ನ ವಿಶ್ರಾಂತಿಯ ಸ್ಥಳವಲ್ಲ, ಯಾಕೆಂದರೆ ನೀನು ಇದನ್ನು ಹಾಳು ಮಾಡಿರುವೆ. ನೀನು ಇದನ್ನು ಹೊಲಸು ಮಾಡಿರುವೆ, ಆದ್ದರಿಂದ ಇದು ನಾಶವಾಗುವದು; ಭಯಂಕರ ರೀತಿಯಲ್ಲಿ ಕೆಡವಲ್ಪಡುವದು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಏಳಿರಿ, ತೊಲಗಿರಿ, ಈ ದೇಶವು ನಿಮ್ಮ ಸುಖವಸತಿಯಾಗದು. ನಾಶನವನ್ನು, ವಿಪರೀತ ನಾಶನವನ್ನು ಉಂಟುಮಾಡುವ ಹೊಲಸು ಇದಕ್ಕೆ ಅಂಟಿಕೊಂಡಿದೆ.
Kannada BSI Bible 2016
ನೀವು ಎದ್ದು ಹೋಗಿರಿ; ಇದು ನಿಮ್ಮ ವಿಶ್ರಾಂತಿ ಅಲ್ಲ; ಇದು ಅಶುದ್ಧವಾಗಿದ್ದ ಕಾರಣ, ನಿಮ್ಮನ್ನು ಕಠಿಣವಾದ ನಾಶನದಿಂದ ನಾಶಮಾಡು ವದು.
Kannada BSI JV (ಕನ್ನಡ ಸತ್ಯವೇದವು J.V. (BSI))
ಏಳಿರಿ, ತೊಲಗಿರಿ! ಈ ದೇಶವು ನಿಮಗೆ ಸುಖ ವಸತಿಯಾಗದು; ನಾಶನವನ್ನು, ವಿಪರೀತನಾಶನವನ್ನು ಉಂಟುಮಾಡುವ ಹೊಲಸು ಇದಕ್ಕೆ ಅಂಟಿಕೊಂಡಿದೆ.
Kannada Bible (KNCL) BSI 2016
ಎದ್ದು ತೊಲಗಿರಿ! ಇದು ನಿಮ್ಮ ನೆಮ್ಮದಿಯ ನೆಲೆಯಲ್ಲ. ನಿಮಗೆ ನಾಶವನ್ನು, ವಿಪರೀತ ನಾಶವನ್ನು ಉಂಟುಮಾಡುವ ಹೊಲಸು ಈ ನಾಡಿಗೆ ಅಂಟಿಕೊಂಡಿದೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಎದ್ದು ಹೋಗಿರಿ; ಇದು ನಿಮ್ಮ ವಿಶ್ರಾಂತಿಯ ಸ್ಥಳವಲ್ಲ, ಏಕೆಂದರೆ ಇದಕ್ಕೆ ಹೊಲಸು ಅಂಟಿಕೊಂಡು, ಯಾವ ಸುಧಾರಣೆಗೂ ಒಳಗಾಗದಂತೆ ಹಾಳಾಗಿ ಹೋಗಿಬಿಟ್ಟಿದೆ.