Micah 2:11 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಈ ಜನರು ನನ್ನ ಮಾತುಗಳನ್ನು ಕೇಳಲು ಇಷ್ಟಪಡುವದಿಲ್ಲ. ಆದರೆ ಬೇರೊಬ್ಬನ ಸುಳ್ಳು ಮಾತುಗಳನ್ನು ಕೇಳಲು ಇಷ್ಟಪಡುವರು. ಸುಳ್ಳು ಪ್ರವಾದಿಯು ಬಂದು, “ನಿಮಗೆ ಒಳ್ಳೆಯ ಭವಿಷ್ಯವಿದೆ. ಬೇಕಾದಷ್ಟು ದ್ರಾಕ್ಷಾರಸ, ಮದ್ಯವು ನಿಮಗೆ ದೊರಕುವವು” ಎಂದು ಹೇಳಿದರೆ ಅವರು ಅವನನ್ನು ನಂಬಿ ಸ್ವೀಕರಿಸಿಕೊಳ್ಳುವರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಗಾಳಿಯನ್ನೂ, ಮೋಸವನ್ನೂ ಹಿಂಬಾಲಿಸುವ ಸುಳ್ಳುಗಾರನೊಬ್ಬನು, “ನಾನು ದ್ರಾಕ್ಷಾರಸ, ಮಧ್ಯಗಳ ವಿಷಯವಾಗಿ ನಿನಗೆ ಪ್ರವಾದನೆ ಮಾಡುವೆನು” ಎಂದು ಹೇಳಿದರೆ, ಈ ಜನರು ಅಂಥವನನ್ನು ಪ್ರವಾದಿಯನ್ನಾಗಿ ಸ್ವೀಕರಿಸಿಕೊಳ್ಳುವರು.
Kannada BSI Bible 2016
ಒಬ್ಬನು ಆತ್ಮದಲ್ಲಿಯೂ ವಂಚನೆಯಲ್ಲಿಯೂ ನಡೆದು ಸುಳ್ಳು ಹೇಳಿ--ನಿನಗೆ ದ್ರಾಕ್ಷಾರಸವನ್ನೂ ಮತ್ತಾಗುವದನ್ನೂ ಕುರಿತು ಪ್ರವಾದಿಸುವೆನೆಂದು ಹೇಳಿ ದರೆ, ಇವನೇ ಈ ಜನರಿಗೆ ಪ್ರವಾದಿಯಾಗಿರುವನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಗಾಳಿಯನ್ನೂ ಮೋಸವನ್ನೂ ಹಿಂಬಾಲಿಸುವ ಸುಳ್ಳುಗಾರನೊಬ್ಬನು - ನಾನು ದ್ರಾಕ್ಷಾರಸಮದ್ಯಗಳ ವಿಷಯವಾಗಿ ನಿನಗೆ ಪ್ರವಾದನೆಮಾಡುವೆನು ಎಂದು ಹೇಳಿದರೆ ಈ ಜನರು ಅಂಥವನನ್ನು ಪ್ರವಾದಿಯನ್ನಾಗಿ ಸ್ವೀಕರಿಸಿಕೊಳ್ಳುವರು.
Kannada Bible (KNCL) BSI 2016
“ಗಾಳಿಮಾತಿನಿಂದ ಮೋಸಮಾಡುವಂಥ ಸುಳ್ಳುಗಾರನೊಬ್ಬನು: ‘ದ್ರಾಕ್ಷಾರಸ, ಮದ್ಯಪಾನಗಳ ಕುರಿತು ಪ್ರವಾದನೆ ಮಾಡುತ್ತೇನೆ, ಎಂದು ಹೇಳಿದರೆ ಅಂಥವನೇ ಈ ಜನರಿಗೆ ಸರಿಯಾದ ಪ್ರವಾದಿ ಎನಿಸಿಕೊಳ್ಳುವನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಒಬ್ಬ ಸುಳ್ಳುಗಾರನೂ ಮೋಸಗಾರನೂ ಬಂದು, ‘ನಿನಗೆ ದ್ರಾಕ್ಷಾರಸವೂ ಮದ್ಯಪಾನವೂ ಯಥೇಚ್ಛವಾಗಿ ದೊರೆಯುವುದೆಂದು ನಾನು ಪ್ರವಾದಿಸುವೆನು,’ ಎಂದು ಹೇಳಿದರೆ, ಇವನೇ ಈ ಜನರಿಗೆ ಪ್ರವಾದಿಯಾಗಿರುವನು.