Micah 2:12 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯಾಕೋಬಿನ ಜನರೇ, ನಾನು ನಿಮ್ಮೆಲ್ಲರನ್ನು ಒಟ್ಟಾಗಿ ಸೇರಿಸುತ್ತೇನೆ. ಇಸ್ರೇಲಿನಲ್ಲಿ ಉಳಿದವರನ್ನೆಲ್ಲಾ ಒಟ್ಟುಗೂಡಿಸುತ್ತೇನೆ. ಹಟ್ಟಿಯೊಳಗೆ ಕುರಿಗಳನ್ನು ಸೇರಿಸುವಂತೆ, ಹುಲ್ಲುಗಾವಲಿನಲ್ಲಿ ಕುರಿಮಂದೆ ಸೇರಿಸಲ್ಪಡುವಂತೆ ನಾನು ಅವರನ್ನು ಒಟ್ಟುಗೂಡಿಸುವೆನು. ಆಗ ಆ ಸ್ಥಳವು ಜನಸಮೂಹದ ಗದ್ದಲದಿಂದ ತುಂಬಿಹೋಗುವುದು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯಾಕೋಬೇ ನಿನ್ನವರೆಲ್ಲರನ್ನು ಒಂದುಗೂಡಿಸುವೆನು. ಇಸ್ರಾಯೇಲಿನ ಉಳಿದ ಜನರನ್ನು ಒಟ್ಟಿಗೆ ಸೇರಿಸುವೆನು. ಅವರನ್ನು ಹಟ್ಟಿಯಲ್ಲಿನ ಕುರಿಗಳಂತೆ ಒಟ್ಟಿಗೆ ಇಡುವೆನು. ಹುಲ್ಲುಗಾವಲಿನ ಮಧ್ಯದಲ್ಲಿನ ಮಂದೆಯ ಹಾಗೆ ಗುಂಪು ಕೂಡಿಸುವೆನು. ಜನರು ದೊಡ್ಡ ಶಬ್ದಮಾಡುವರು.
Kannada BSI Bible 2016
ಯಾಕೋಬೇ ನಿನ್ನವರನ್ನೆಲ್ಲಾ ನಿಶ್ಚಯವಾಗಿ ಕೂಡಿಸುವೆನು; ಇಸ್ರಾಯೇಲಿನಲ್ಲಿ ಉಳಿದವರನ್ನು ನಿಶ್ಚಯವಾಗಿ ಕೂಡಿಸುವೆನು, ಬೊಚ್ರದ ಕುರಿಗ ಳಂತೆಯೂ ತಮ್ಮ ಹಟ್ಟಿಯ ನಡುವೆ ಇರುವ ಮಂದೆ ಯಂತೆಯೂ ಅವರನ್ನು ಒಟ್ಟಾಗಿ ಕೂಡಿಡುವೆನು; ಬಹುಮಂದಿಯಾಗಿರುವ ಕಾರಣ ಅವರು ಮಹಾ ಶಬ್ದ ಮಾಡುವರು.ಒಡೆಯುವವನು ಅವರ ಮುಂದೆ ಬಂದಿದ್ದಾನೆ; ಅವರು ಬಾಗಲನ್ನು ಒಡೆದು ಅದರಿಂದ ಹಾದುಹೋಗಿದ್ದಾರೆ; ಅವರ ಅರಸನು ಅವರ ಮುಂದೆ ಹಾದುಹೋಗುತ್ತಾನೆ; ಕರ್ತನು ಅವರಿಗೆ ಮುಂದಾಗಿರುವನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯಾಕೋಬೇ, ನಿನ್ನವರನ್ನೆಲ್ಲಾ ಕೂಡಿಸೇ ಕೂಡಿಸುವೆನು; ಇಸ್ರಾಯೇಲಿನ ಜನಶೇಷವನ್ನು ಸೇರಿಸೇ ಸೇರಿಸುವೆನು. ಅವರನ್ನು ಹಟ್ಟಿಯಲ್ಲಿನ ಕುರಿಗಳಂತೆ ಒಟ್ಟಿಗಿಡುವೆನು, ಕಾವಲ ಮಧ್ಯದಲ್ಲಿನ ಮಂದೆಯ ಹಾಗೆ ಗುಂಪು ಹಾಕುವೆನು; ಜನರು ಗಿಜಿಗುಟ್ಟುವರು.
Kannada Bible (KNCL) BSI 2016
“ಯಕೋಬ ವಂಶಜರೇ, ನಾನು ನಿಮ್ಮನ್ನೆಲ್ಲಾ ಖಂಡಿತವಾಗಿ ಒಟ್ಟುಗೂಡಿಸುವೆನು. ಇಸ್ರಯೇಲಿನ ಅಳಿದುಳಿದ ಜನರನ್ನು ಸೇರಿಸಿಯೇ ಸೇರಿಸುವೆನು. ಹಟ್ಟಿಯಲ್ಲಿರುವ ಕುರಿಗಳಂತೆ ಅವರನ್ನು ಒಟ್ಟಿಗೆ ಸೇರಿಸುವೆನು. ಹುಲ್ಲುಗಾವಲಿನಲ್ಲಿರುವ ಕುರಿಮಂದೆಯಂತೆ ಒಂದುಗೂಡಿಸುವೆನು,” ಎನ್ನುತ್ತಾರೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಯಾಕೋಬೇ, ನಿನ್ನವರನ್ನೆಲ್ಲಾ ನಿಶ್ಚಯವಾಗಿ ಕೂಡಿಸುವೆನು. ಇಸ್ರಾಯೇಲಿನಲ್ಲಿ ಉಳಿದವರನ್ನು ನಿಶ್ಚಯವಾಗಿ ಕೂಡಿಸುವೆನು. ಬೊಚ್ರದ ಕುರಿಗಳಂತೆಯೂ ತಮ್ಮ ಹಟ್ಟಿಯ ನಡುವೆ ಇರುವ ಮಂದೆಯಂತೆಯೂ ಅವರನ್ನು ಒಟ್ಟಾಗಿ ಕೂಡಿಸುವೆನು. ಹುಲ್ಲುಗಾವಲಿನ ಕುರಿಮಂದೆಯಂತೆ, ಸ್ಥಳವು ಜನರಿಂದ ತುಂಬಿ ತುಳುಕುವುದು.