Micah 2:13 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆಗ ಒಡೆದುಹಾಕುವವನು ಜನಗಳ ಮುಂದೆ ಮುನ್ನುಗ್ಗಿ ಹೋಗಿ, ದ್ವಾರಗಳನ್ನು ಒಡೆದುಹಾಕಿದಾಗ ಜನರು ಪಟ್ಟಣವನ್ನು ಬಿಟ್ಟುಹೋಗುವರು. ಅವರು ತಮ್ಮ ರಾಜನನ್ನೂ ಕರ್ತನನ್ನೂ ಹಿಂಬಾಲಿಸಿಕೊಂಡು ಅಲ್ಲಿಂದ ಹೋಗುವರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಹೊಡೆದು ಹೋಗುವವನು ಅವರ ಮುಂದೆ ಹೊರಟಿದ್ದಾನೆ. ಅವರೂ ಬಾಗಿಲನ್ನು ಒಡೆದು ನುಗ್ಗಿ ಹೊರಟಿದ್ದಾರೆ. ಅವರ ಅರಸನು ಅವರ ಮುಂದೆ ತೆರಳಿದ್ದಾನೆ. ಯೆಹೋವನು ಅವರ ಮುಂಭಾಗದಲ್ಲಿ ನಡೆಯುತ್ತಿದ್ದಾನೆ.
Kannada BSI Bible 2016
ಒಡೆಯುವವನು ಅವರ ಮುಂದೆ ಬಂದಿದ್ದಾನೆ; ಅವರು ಬಾಗಲನ್ನು ಒಡೆದು ಅದರಿಂದ ಹಾದುಹೋಗಿದ್ದಾರೆ; ಅವರ ಅರಸನು ಅವರ ಮುಂದೆ ಹಾದುಹೋಗುತ್ತಾನೆ; ಕರ್ತನು ಅವರಿಗೆ ಮುಂದಾಗಿರುವನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಒಡೆಯುವವನು ಅವರ ಮುಂದೆ ಹೊರಟಿದ್ದಾನೆ; ಅವರೂ ಬಾಗಿಲನ್ನು ಒಡೆದು ನುಗ್ಗಿ ಹೊರಟಿದ್ದಾರೆ; ಅವರ ಅರಸನು ಅವರ ಮುಂದೆ ತೆರಳಿದ್ದಾನೆ, ಯೆಹೋವನು ಅವರ ಮುಂಭಾಗದಲ್ಲಿ ನಡೆಯುತ್ತಿದ್ದಾನೆ.
Kannada Bible (KNCL) BSI 2016
ಬಾಗಿಲನ್ನು ಒಡೆದು ತೆರೆಯುವಂಥವನು ಜನರ ಮುಂದಾಳಾಗಿ ಹೊರಡುವನು; ಅವರೂ ಬಾಗಿಲನ್ನು ಒಡೆದು ನುಗ್ಗುವರು; ಅವರ ಅರಸನು ಮುಂದಾಳಾಗಿ ಹೋಗುವನು. ಸರ್ವೇಶ್ವರಸ್ವಾಮಿಯೇ ಅವರ ಮುಂದಾಳತ್ವವನ್ನು ವಹಿಸುವರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಮಾರ್ಗ ತೆರೆಯುವಾತನು ಅವರ ಮುಂದೆ ಹೋಗುವನು. ಅವರು ಬಾಗಿಲು ತೆರೆದು ಹೊರಗೆ ಹೋಗುವರು. ಅವರ ಅರಸನು ಅವರ ಮುಂದೆ ಹಾದು ಹೋಗುತ್ತಾನೆ. ಯೆಹೋವ ದೇವರು ಅವರ ಮುಂದಾಳತ್ವವನ್ನು ವಹಿಸುವರು.”