Micah 2:3 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅದಕ್ಕಾಗಿಯೇ ಯೆಹೋವನು ಹೀಗೆ ಹೇಳುತ್ತಾನೆ: “ನೋಡಿ, ನಾನು ಈ ಕುಟುಂಬದ ವಿರುದ್ಧವಾಗಿ ಸಂಕಟ ತರಲು ಯೋಚಿಸುತ್ತಿದ್ದೇನೆ. ನಿನ್ನನ್ನು ನೀನು ರಕ್ಷಿಸಲು ಸಾಧ್ಯವಿರುವುದಿಲ್ಲ. ಭಯಂಕರ ದಿವಸಗಳು ಬರುವದರಿಂದ ನೀನು ಉಬ್ಬಿಕೊಳ್ಳುವುದನ್ನು ನಿಲ್ಲಿಸುವೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದಕಾರಣ ಯೆಹೋವನು ಇಂತೆನ್ನುತ್ತಾನೆ, “ಇಗೋ ಈ ವಂಶಕ್ಕೆ ನಾನೇ ಕೇಡನ್ನು ಕಲ್ಪಿಸುತ್ತೇನೆ, ಅದರ ಭಾರದಿಂದ ನಿಮ್ಮ ಕುತ್ತಿಗೆಗಳನ್ನು ತಪ್ಪಿಸಿಕೊಳ್ಳಲಾರಿರಿ, ನೀವು ತಲೆಯೆತ್ತಿ ನಡೆಯುವುದಕ್ಕಾಗದು. ಅದು ಕೆಟ್ಟ ಕಾಲವೇ ಸರಿ.
Kannada BSI Bible 2016
ಆದದರಿಂದ ಕರ್ತನು ಹೇಳುವದೇನಂದರೆ--ಇಗೋ, ನಾನು ಈ ಕುಟುಂಬಕ್ಕೆ ವಿರೋಧವಾಗಿ ಕೆಟ್ಟದ್ದನ್ನು ಯೋಚಿಸು ತ್ತೇನೆ; ಆದದರಿಂದ ನೀವು ನಿಮ್ಮ ಕುತ್ತಿಗೆಗಳನ್ನು ಹಿಂತೆ ಗೆಯದೆ ಅಹಂಕಾರವಾಗಿ ನಡೆಯದೆ ಇರುವಿರಿ; ಇದು ಕೆಟ್ಟಕಾಲವೇ.
Kannada BSI JV (ಕನ್ನಡ ಸತ್ಯವೇದವು J.V. (BSI))
ಆದಕಾರಣ ಯೆಹೋವನು ಇಂತೆನ್ನುತ್ತಾನೆ - ಇಗೋ, ಈ ವಂಶಕ್ಕೆ ನಾನೇ ಕೇಡನ್ನು ಕಲ್ಪಿಸುತ್ತೇನೆ; ಅದರ ಭಾರದಿಂದ ನಿಮ್ಮ ಕುತ್ತಿಗೆಗಳನ್ನು ತಪ್ಪಿಸಿಕೊಳ್ಳಲಾರಿರಿ, ನೀವು ತಲೆಯೆತ್ತಿ ನಡೆಯುವದಕ್ಕಾಗದು; ಅದು ಕೆಟ್ಟಕಾಲವೇ ಸರಿ.
Kannada Bible (KNCL) BSI 2016
ಆದುದರಿಂದ ಸರ್ವೇಶ್ವರ ಇಂತೆನ್ನುತ್ತಾರೆ: “ಈ ಪೀಳಿಗೆಯ ಮೇಲೆ ನಾನೇ ವಿನಾಶವನ್ನು ಬರಮಾಡುತ್ತೇನೆ. ಆ ಕೇಡಿನಿಂದ ನೀವು ತಲೆತಪ್ಪಿಸಿಕೊಳ್ಳಲಾರಿರಿ. ತಲೆಯೆತ್ತಿ ನಡೆಯಲು ನಿಮಗೆ ಸಾಧ್ಯವಾಗದು. ಕಾಲವು ಅಷ್ಟು ಹದಗೆಟ್ಟಿರುವುದು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದ್ದರಿಂದ ಯೆಹೋವ ದೇವರು ಹೀಗೆನ್ನುತ್ತಾರೆ, “ಇಗೋ, ನಾನು ಈ ವಂಶಕ್ಕೆ ವಿರೋಧವಾಗಿ ನಾಶನವನ್ನು ಯೋಚಿಸುತ್ತೇನೆ. ಇದರಿಂದ ನೀವು ನಿಮ್ಮನ್ನು ರಕ್ಷಿಸಿಕೊಳ್ಳಲಾರಿರಿ. ಅಹಂಕಾರವಾಗಿ ನಡೆಯದೆ ಇರುವಿರಿ. ಇದು ವಿಪತ್ತಿನ ಕಾಲವೇ,