Micah 2:6 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಜನರು, “ನೀನು ನಮಗೆ ಬೋಧಿಸಬೇಡ, ಆ ಕೆಟ್ಟವಿಷಯಗಳನ್ನು ನಮಗೆ ಹೇಳಬೇಡ, ನಮಗೆ ಯಾವ ಕೆಟ್ಟ ವಿಷಯವೂ ಸಂಭವಿಸುವುದಿಲ್ಲ” ಎಂದು ಹೇಳುತ್ತಾರೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಹಾ, ಆ ಕೆಡುಕರು “ಪ್ರವಾದನೆ ಮಾಡಬೇಡಿರಿ. ಇಂಥ ವಿಷಯಗಳಲ್ಲಿ ಪ್ರವಾದನೆಯನ್ನು ಎತ್ತಬಾರದು, ದೂಷಣೆಗಳು ತೊಲಗುವುದೇ ಇಲ್ಲ” ಎಂದು ಪ್ರವಾದನೆ ಮಾಡುತ್ತಾರೆ.
Kannada BSI Bible 2016
ಪ್ರವಾದಿಸಬೇಡಿರೆಂದು ಪ್ರವಾದಿಸುವವರಿಗೆ ಅನ್ನು ತ್ತಾರೆ; ಅವರಿಗೆ ಆತನು ಪ್ರವಾದಿಸನು, ಆದರೆ ಅವರು ನಾಚಿಕೆಪಡುವದಿಲ್ಲ.
Kannada BSI JV (ಕನ್ನಡ ಸತ್ಯವೇದವು J.V. (BSI))
[ಆಹಾ, ಆ ಕೆಡುಕರು] ಪ್ರವಾದನೆ ಮಾಡಬೇಡಿರಿ; ಇಂಥ ವಿಷಯಗಳಲ್ಲಿ ಪ್ರವಾದನೆಯನ್ನೆತ್ತ ಕೂಡದು; ದೂಷಣೆಗಳು ತೊಲಗುವದೇ ಇಲ್ಲ ಎಂದು ಪ್ರವಾದನೆಮಾಡುತ್ತಾರೆ.
Kannada Bible (KNCL) BSI 2016
ಆಗ ಆ ಕೆಡುಕರು, “ಪ್ರವಾದನೆ ಮಾಡಬೇಡ. ಇಂಥ ವಿಷಯಗಳಲ್ಲಿ ಪ್ರವಾದನೆಯ ಮಾತೆತ್ತಕೂಡದು. ಆ ವಿನಾಶ ನಮಗೆ ತಟ್ಟುವುದಿಲ್ಲ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಪ್ರವಾದಿಸಬೇಡ, ಈ ಸಂಗತಿಗಳ ಬಗ್ಗೆ ಪ್ರವಾದನೆ ಹೇಳಬೇಡ. ಅವಮಾನ ನಮ್ಮ ಮೇಲೆ ಬರುವುದೇ ಇಲ್ಲ,” ಎಂದು ಅವರ ಪ್ರವಾದಿಗಳು ಹೇಳುತ್ತಾರೆ.