Micah 2:7 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆದರೆ ಯಾಕೋಬಿನ ಜನರೇ, ನಾನು ನಿಮಗೆ ಹೇಳಲೇಬೇಕು. ನಿಮ್ಮ ದುಷ್ಟತನದ ನಿಮಿತ್ತ ಯೆಹೋವನು ತನ್ನ ತಾಳ್ಮೆಯನ್ನು ಕಳೆದುಕೊಂಡಿದ್ದಾನೆ. ನೀವು ನ್ಯಾಯವಾದ ರೀತಿಯಲ್ಲಿ ಜೀವಿಸುತ್ತಿದ್ದರೆ ನಾನು ನಿಮಗೆ ಒಳ್ಳೆಯ ಸಂಗತಿಗಳನ್ನು ತಿಳಿಸುತ್ತಿದ್ದೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯಾಕೋಬ ವಂಶವೇ, “ಯೆಹೋವನ ಆತ್ಮವು ತಾಳ್ಮೆಯಿಲ್ಲದ್ದೋ? ಇಂಥ ಕೃತ್ಯಗಳು ಆತನವೋ” ಎಂದು ಏಕೆ ಹೇಳುತ್ತೀ? ನನ್ನ ನುಡಿಗಳು ಸನ್ಮಾರ್ಗಿಗಳಿಗೆ ಹಿತಕರವಷ್ಟೇ.
Kannada BSI Bible 2016
ಯಾಕೋಬಿನ ಮನೆತನದವ ರೆಂದು ಹೆಸರುಗೊಂಡವರೇ, ಕರ್ತನ ಆತ್ಮವು ಕಡಿಮೆ ಯಾಯಿತೋ? ಇವು ಆತನ ಕ್ರಿಯೆಗಳೋ? ಯಥಾ ರ್ಥವಾಗಿ ನಡೆಯುವವನಿಗೆ ನನ್ನ ಮಾತುಗಳು ಒಳ್ಳೇದನ್ನು ಮಾಡುವದಿಲ್ಲವೋ?
Kannada BSI JV (ಕನ್ನಡ ಸತ್ಯವೇದವು J.V. (BSI))
ಯಾಕೋಬ್ ವಂಶವೇ, ಯೆಹೋವನ ಸ್ವಭಾವವು ಹಿಡಿತವಾದದ್ದೋ, ಇಂಥ ಕೃತ್ಯಗಳು ಆತನವೋ ಎಂದು ಏಕೆ ಹೇಳುತ್ತೀ? ನನ್ನ ನುಡಿಗಳು ಸನ್ಮಾರ್ಗಿಗಳಿಗೇ ಹಿತಕರವಷ್ಟೆ.
Kannada Bible (KNCL) BSI 2016
ಯಕೋಬ ವಂಶವು ಶಾಪಗ್ರಸ್ತವಾಗಲು ಸಾಧ್ಯವೆ? ಸರ್ವೇಶ್ವರ ತಾಳ್ಮೆಗೆಡುವುದುಂಟೆ? ಇಂಥ ಕೃತ್ಯಗಳನ್ನು ಅವರು ಮಾಡಿಯಾರೆ? ಸನ್ಮಾರ್ಗದಲ್ಲಿ ನಡೆಯುವವರಿಗೆ ಸ್ವಾಮಿಯ ವಾಕ್ಯ ಒಳಿತನ್ನುಂಟುಮಾಡುವುದಿಲ್ಲವೆ?” ಎನ್ನುವರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯಾಕೋಬಿನ ಮನೆತನದವರೇ, “ಯೆಹೋವ ದೇವರ ಆತ್ಮವು ಕೋಪಗೊಂಡಿದೆಯೇ? ಅವರು ಇಂಥ ಕಾರ್ಯ ಮಾಡುವರೋ?” “ಯಥಾರ್ಥವಾಗಿ ನಡೆಯುವವನಿಗೆ ನನ್ನ ಮಾತುಗಳು ಒಳ್ಳೆಯದನ್ನು ಮಾಡುವುದಿಲ್ಲವೋ?