Micah 3:6 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಹೀಗಿರುವದರಿಂದ ನಿಮಗೆ ರಾತ್ರಿಯಂತಿರುವದು. ನಿಮಗೆ ದರ್ಶನಗಳಾಗುವದಿಲ್ಲ. ಮುಂದೆ ಏನು ಸಂಭವಿಸುತ್ತದೆ ಎಂಬುದನ್ನು ನೀವು ನೋಡುವದಿಲ್ಲ. ಆದ್ದರಿಂದ ನಿಮಗೆ ಕತ್ತಲೆಯಂತಿದೆ. ಪ್ರವಾದಿಗಳಿಗೆ ಸೂರ್ಯನು ಮುಳುಗಿರುತ್ತಾನೆ. ಅವರಿಗೆ ಮುಂದೆ ಆಗುವಂಥದು ಕಾಣಿಸುವುದಿಲ್ಲ. ಆದ್ದರಿಂದ ಅವರಿಗೆ ಎಲ್ಲಾ ಕತ್ತಲೆಯಾಗಿದೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ನೀವು ಇಂಥವರಾದ ಕಾರಣ ನಿಮಗೆ ರಾತ್ರಿಯಾಗುವುದು, ದಿವ್ಯದರ್ಶನವಾಗದು, ನಿಮಗೆ ಕತ್ತಲು ಕವಿಯುವುದು ಮತ್ತು ಕಣಿಹೇಳಲಾಗದು. ಸೂರ್ಯನು ಪ್ರವಾದಿಗಳಿಗೆ ಮುಣುಗುವನು, ಹಗಲು ಅವರಿಗೆ ಕಾರ್ಗತ್ತಲಾಗುವುದು.
Kannada BSI Bible 2016
ದರ್ಶನವಿಲ್ಲದ ನಿಮಗೆ ರಾತ್ರಿ ಯಾಗುವದು; ಶಕುನವಿಲ್ಲದೆ ನಿಮಗೆ ಕತ್ತಲಾಗುವದು; ಹೌದು, ಪ್ರವಾದಿಗಳ ಮೇಲೆ ಸೂರ್ಯ ಮುಣುಗು ವದು, ಅವರ ಮೇಲೆ ಹಗಲು ಕತ್ತಲಾಗುವದು.
Kannada BSI JV (ಕನ್ನಡ ಸತ್ಯವೇದವು J.V. (BSI))
ನೀವು ಇಂಥವರಾದಕಾರಣ ನಿಮಗೆ ರಾತ್ರಿಯಾಗುವದು, ದಿವ್ಯದರ್ಶನವಾಗದು; ನಿಮಗೆ ಕತ್ತಲುಕವಿಯುವದು, ಕಣಿಹೇಳಲಾಗದು; ಸೂರ್ಯನು ಪ್ರವಾದಿಗಳಿಗೆ ಮುಣುಗುವನು, ಹಗಲು ಅವರಿಗೆ ಕಾರ್ಗತ್ತಲಾಗುವದು;
Kannada Bible (KNCL) BSI 2016
ಅಂಥ ಪ್ರವಾದಿಗಳಿಗೆ ಸರ್ವೇಶ್ವರ: “ಅಂಧಕಾರ ನಿಮ್ಮನ್ನು ಆವರಿಸುವುದು. ದಿವ್ಯದರ್ಶನ ನಿಮಗೆ ದೊರಕದು. ನಿಮಗೆ ಕತ್ತಲು ಕವಿದಂತಾಗಿ ಕಣಿಹೇಳಲು ಸಾಧ್ಯವಾಗದು. ಸೂರ್ಯ ನಿಮ್ಮ ಪಾಲಿಗೆ ಮುಳುಗಿದಂತೆಯೇ, ಹಗಲು ನಿಮಗೆ ಕಾರ್ಗತ್ತಲೆಯಂತೆಯೆ.”
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ದರ್ಶನವಿಲ್ಲದೆ, ನಿಮಗೆ ರಾತ್ರಿಯಾಗುವುದು; ಶಕುನವಿಲ್ಲದೆ ನಿಮಗೆ ಕತ್ತಲಾಗುವುದು. ಪ್ರವಾದಿಗಳಿಗೆ ಸೂರ್ಯ ಮುಳುಗುವುದು. ಅವರ ಮೇಲೆ ಹಗಲು ಕತ್ತಲೆಯಾಗುವುದು.