Micah 3:7 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ದೇವದರ್ಶಿಗಳು ನಾಚಿಕೆಗೊಂಡಿದ್ದಾರೆ. ಭವಿಷ್ಯ ಹೇಳುವವರು ನಾಚಿಕೆಗೊಳಗಾಗಿದ್ದಾರೆ. ಯಾಕೆಂದರೆ ದೇವರು ಅವರ ಕೂಡ ಮಾತನಾಡುವದನ್ನು ನಿಲ್ಲಿಸಿರುವದರಿಂದ ಅವರು ಏನನ್ನೂ ಹೇಳುವದಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ದಿವ್ಯದರ್ಶಿಗಳು ಆಶಾಭಂಗಪಡುವರು, ಕಣಿಯವರು ನಾಚಿಕೊಳ್ಳುವರು. ಎಲ್ಲರೂ ಬಟ್ಟೆಯಿಂದ ಬಾಯಿಮುಚ್ಚಿಕೊಳ್ಳುವರು. ಅವರಿಗೆ ದೈವೋತ್ತರವೇ ದೊರೆಯುವುದಿಲ್ಲ” ಎಂದು ನುಡಿಯುತ್ತಾನೆ.
Kannada BSI Bible 2016
ಆಗ ದರ್ಶಿಗಳು ನಾಚಿಕೆಪಡುವರು, ಶಕುನಗಾರರು ವಿಸ್ಮಯಗೊಳ್ಳುವರು; ಹೌದು, ದೇವರಿಂದ ಉತ್ತರ ವಿಲ್ಲದ ಕಾರಣ ಎಲ್ಲರೂ ತಮ್ಮ ತುಟಿಗಳನ್ನು ಮುಚ್ಚಿ ಕೊಳ್ಳುವರು.
Kannada BSI JV (ಕನ್ನಡ ಸತ್ಯವೇದವು J.V. (BSI))
ದಿವ್ಯದರ್ಶಿಗಳು ಆಶಾಭಂಗಪಡುವರು, ಕಣಿಯವರು ನಾಚಿಕೆಗೊಳ್ಳುವರು, ಎಲ್ಲರೂ ಬಟ್ಟೆಯಿಂದ ಬಾಯಿಮುಚ್ಚಿಕೊಳ್ಳುವರು; ಅವರಿಗೆ ದೈವೋತ್ತರವೇ ದೊರೆಯದು.
Kannada Bible (KNCL) BSI 2016
ಹೀಗಾಗಿ ದಿವ್ಯದರ್ಶಿಗಳಿಗೆ ಅವಮಾನವಾಗುವುದು. ಕಣಿ ಹೇಳುವವರಿಗೆ ನಾಚಿಕೆಯಾಗುವುದು. ಅವರೆಲ್ಲರೂ ಬಟ್ಟೆಯಿಂದ ಬಾಯಿ ಮುಚ್ಚಿಕೊಳ್ಳಬೇಕಾಗುವುದು. ಕಾರಣ, ಅವರಿಗೆ ದೇವರಿಂದ ಯಾವ ಪ್ರತ್ಯುತ್ತರವೂ ಬರದು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ದರ್ಶಿಗಳು ನಾಚಿಕೆಪಡುವರು, ಶಕುನಗಾರರು ಅವಮಾನಗೊಳ್ಳುವರು. ದೇವರಿಂದ ಉತ್ತರವಿಲ್ಲದ ಕಾರಣ, ಎಲ್ಲರೂ ತಮ್ಮ ತುಟಿಗಳನ್ನು ಮುಚ್ಚಿಕೊಳ್ಳುವರು.”