Micah 4:10 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಚೀಯೋನ್ ಕುಮಾರಿಯೇ, ಪ್ರಸವವೇದನೆಯಲ್ಲಿರುವ ಸ್ತ್ರೀಯಂತೆ ನೀನು ನೋವನ್ನು ಅನುಭವಿಸು. ನೀನು ಜೆರುಸಲೇಮ್ ಪಟ್ಟಣದಿಂದ ಹೊರಗೆ ಹೋಗಿ ಹೊಲದಲ್ಲಿ ವಾಸಿಸುವೆ. ನಾನು ಹೇಳುವುದೇನೆಂದರೆ, ನೀನು ಬಾಬಿಲೋನಿಗೆ ಹೋಗುವೆ, ಆದರೆ ಅಲ್ಲಿ ನೀನು ರಕ್ಷಿಸಲ್ಪಡುವೆ. ಯೆಹೋವನು ಅಲ್ಲಿಗೆ ಬಂದು ನಿನ್ನನ್ನು ರಕ್ಷಿಸುವನು. ನಿನ್ನ ವೈರಿಗಳಿಂದ ನಿನ್ನನ್ನು ಬಿಡುಗಡೆ ಮಾಡುವನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಚೀಯೋನ್ ಯುವತಿಯೇ, ಹೆರುವವಳಂತೆ ವೇದನೆಗೆ ಒಳಗಾಗು, ಯಾತನೆಪಡು. ನೀನೀಗ ಪಟ್ಟಣದಿಂದ ಹೊರಟು ಕಾಡಿನಲ್ಲಿ ವಾಸಿಸುತ್ತಾ ಬಾಬೆಲಿಗೆ ಸೇರುವಿ. ಅಲ್ಲೇ ನಿನಗೆ ಉದ್ಧಾರವಾಗುವುದು. ಅಲ್ಲೇ ಯೆಹೋವನು ಶತ್ರುಗಳ ಕೈಯಿಂದ ನಿನ್ನನ್ನು ಬಿಡಿಸುವನು.
Kannada BSI Bible 2016
ಚೀಯೋನಿನ ಕುಮಾರ್ತೆಯೇ, ಹೆರುವವಳಂತೆ ವೇದನೆಪಡು. ಈಗ ಪಟ್ಟಣದೊಳಗಿಂದ ಹೊರಟು ಹೊಲದಲ್ಲಿ ವಾಸಮಾಡಿ ಬಾಬೆಲಿಗೆ ಹೋಗುವಿ; ಅಲ್ಲಿ ನಿನಗೆ ಬಿಡುಗಡೆಯಾಗುವದು; ಅಲ್ಲಿ ಕರ್ತನು ನಿನ್ನನ್ನು ನಿನ್ನ ಶತ್ರುಗಳ ಕೈಯೊಳಗಿಂದ ವಿಮೋಚಿ ಸುವನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಚೀಯೋನ್ ಯುವತಿಯೇ, ಹೆರುವವಳಂತೆ ವೇದನೆಗೆ ಒಳಗಾಗು, ಯಾತನೆಪಡು; ನೀನೀಗ ಪಟ್ಟಣದೊಳಗಿಂದ ಹೊರಟು ಕಾಡಿನಲ್ಲಿ ವಾಸಿಸುತ್ತಾ ಬಾಬೆಲಿಗೆ ಸೇರುವಿ; ಅಲ್ಲೇ ನಿನಗೆ ಉದ್ಧಾರವಾಗುವದು, ಅಲ್ಲೇ ಯೆಹೋವನು ಶತ್ರುಗಳ ಕೈಯಿಂದ ನಿನ್ನನ್ನು ಬಿಡಿಸುವನು.
Kannada Bible (KNCL) BSI 2016
ಸಿಯೋನ್ ಕುವರಿಯೇ, ಪ್ರಸವವೇದನೆಯಿಂದ ನರಳಾಡು; ಪಟ್ಟಣವನ್ನು ಬಿಟ್ಟು, ಬಯಲಿನಲ್ಲಿ ವಾಸಮಾಡು. ಬಾಬಿಲೋನಿಗೆ ತೆರಳು. ಅಲ್ಲೇ ನಿನಗೆ ಉದ್ಧಾರವಾಗುವುದು. ಅಲ್ಲೇ ನಿನ್ನ ಶತ್ರುಗಳಿಂದ ಸರ್ವೇಶ್ವರ ಬಿಡುಗಡೆ ಮಾಡುವರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಚೀಯೋನ್ ಪುತ್ರಿಯೇ ಹೆರುವವಳಂತೆ ವೇದನೆ ತಾಳಿಕೋ, ಏಕೆಂದರೆ ಈಗ ಪಟ್ಟಣದೊಳಗಿಂದ ಹೊರಟು ಹೊಲದಲ್ಲಿ ವಾಸಮಾಡಿ ಬಾಬಿಲೋನಿಗೆ ಹೋಗುವೆ, ಅಲ್ಲಿ ನಿನಗೆ ಬಿಡುಗಡೆಯಾಗುವುದು. ಅಲ್ಲಿ ಯೆಹೋವ ದೇವರು ನಿನ್ನನ್ನು ನಿನ್ನ ಶತ್ರುಗಳ ಕೈಯೊಳಗಿಂದ ವಿಮೋಚಿಸುವರು.