Micah 4:11 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಎಷ್ಟೋ ಜನಾಂಗಗಳು ನಿನ್ನ ವಿರುದ್ಧ ಯುದ್ಧಕ್ಕೆ ಬಂದಿವೆ. “ಅಲ್ಲಿ ನೋಡಿ, ಚೀಯೋನ್, ಬನ್ನಿ ಆಕ್ರಮಣ ಮಾಡೋಣ” ಎಂದು ಹೇಳುವರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
‘ಯೆರೂಸಲೇಮ್ ಹೊಲಸಾಗಿ ಹೋಗಲಿ. ಚೀಯೋನಿನ ನಾಶನವನ್ನು ಕಣ್ಣು ತುಂಬಾ ನೋಡೋಣ’” ಎಂದು ಯೋಚಿಸುವ ಬಹು ಜನಾಂಗಗಳು ನಿನಗೆ ವಿರುದ್ಧವಾಗಿ ಕೂಡಿ ಬಂದಿವೆ.
Kannada BSI Bible 2016
ಆದರೆ ಈಗ ಅನೇಕ ಜನಾಂಗಗಳು ನಿನಗೆ ವಿರೋಧವಾಗಿ ಕೂಡಿಬಂದಿವೆ; ಅವರು--ಅವಳು ಕೆಡಿಸಲ್ಪಡಲಿ, ಚೀಯೋನಿನ ಮೇಲೆ ನಮ್ಮ ಕಣ್ಣುಗಳು ದೃಷ್ಟಿಸಲಿ ಎಂದು ಹೇಳುತ್ತಾರೆ.
Kannada BSI JV (ಕನ್ನಡ ಸತ್ಯವೇದವು J.V. (BSI))
[ಯೆರೂಸಲೇಮು] ಹೊಲಸಾಗಿ ಹೋಗಲಿ, ಚೀಯೋನಿನ ನಾಶನವನ್ನು ಕಣ್ಣುತುಂಬಾ ನೋಡೋಣ ಅಂದುಕೊಳ್ಳುವ ಬಹು ಜನಾಂಗಗಳು ನಿನಗೆ ವಿರುದ್ಧವಾಗಿ ಕೂಡಿಬಂದಿವೆ.
Kannada Bible (KNCL) BSI 2016
ಹಲವು ರಾಷ್ಟ್ರಗಳು ನಿನಗೆ ವಿರುದ್ಧ ಕೂಡಿಬಂದು: “ಜೆರುಸಲೇಮನ್ನು ಹೊಲಸುಮಾಡೋಣ, ‘ಸಿಯೋನಿನ ನಾಶವನ್ನು ಕಣ್ಣಾರೆ ನೋಡೋಣ’ ಎನ್ನುತ್ತಿವೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ ಈಗ ಅನೇಕ ಜನಾಂಗಗಳು ನಿನಗೆ ವಿರೋಧವಾಗಿ ಕೂಡಿಬಂದಿವೆ. ಅವರು, “ಯೆರೂಸಲೇಮನ್ನು ಕೆಡಿಸೋಣ. ಚೀಯೋನಿನ ನಾಶನವನ್ನು ಕಣ್ಣಾರೆ ನೋಡೋಣ,” ಎಂದು ಹೇಳುತ್ತಾರೆ.