Micah 4:13 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ಚೀಯೋನ್ ಕುಮಾರಿಯೇ ಎದ್ದೇಳು, ಆ ಜನರನ್ನು ಪುಡಿಮಾಡು! ನಾನು ನಿನ್ನನ್ನು ಬಲಶಾಲಿಯನ್ನಾಗಿ ಮಾಡುವೆನು. ಕಬ್ಬಿಣದ ಕೊಂಬುಗಳಿರುವಂತೆ, ತಾಮ್ರದ ಗೊರಸುಗಳಿರುವಂತೆ ನಿನ್ನನ್ನು ಮಾಡುವೆನು. ಎಷ್ಟೋ ಜನರನ್ನು ನೀನು ತುಂಡುತುಂಡು ಮಾಡುವೆ. ಅವರ ಐಶ್ವರ್ಯವನ್ನು ನೀನು ಯೆಹೋವನಿಗೆ ಕೊಡುವೆ. ಅವರ ನಿಕ್ಷೇಪಗಳನ್ನು ಇಡೀ ಭೂಮಿಗೆ ಒಡೆಯನಾಗಿರುವ ಯೆಹೋವನಿಗೆ ಅರ್ಪಿಸುವಿ.”
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಚೀಯೋನ್ ನಗರಿಯೇ ಎದ್ದು ಒಕ್ಕಣೆ ಮಾಡು, ನಾನು ನಿನ್ನ ಕೊಂಬನ್ನು ಕಬ್ಬಿಣದ ಕೊಂಬನ್ನಾಗಿಯೂ, ನಿನ್ನ ಗೊರಸನ್ನು ತಾಮ್ರದ ಗೊರಸನ್ನಾಗಿಯೂ ಮಾಡುವೆನು. ನೀನು ಬಹು ಜನಾಂಗಗಳನ್ನು ಚೂರುಚೂರಾಗಿ ತುಳಿದುಬಿಡುವಿ, ಆ ದೇಶಗಳು ಕೊಳ್ಳೆ ಹೊಡೆದು ಸಂಪಾದಿಸಿದ್ದ ಐಶ್ವರ್ಯವನ್ನು ನೀನು ಯೆಹೋವನಿಗಾಗಿ ಮೀಸಲಾಗಿಡುವೆ. ಅವರ ಆಸ್ತಿಯನ್ನು ಲೋಕದ ಕರ್ತನ ಮುಂದೆ ಸಮರ್ಪಿಸುವಿ.
Kannada BSI Bible 2016
ಚೀಯೋನಿನ ಕುಮಾರ್ತೆಯೇ; ಎದ್ದು ತುಳಿ. ನಿನ್ನ ಕೊಂಬನ್ನು ಕಬ್ಬಿಣವಾಗಿಯೂ ನಿನ್ನ ಗೊರಸೆಗಳನ್ನು ತಾಮ್ರವಾಗಿಯೂ ಮಾಡುವೆನು. ನೀನು ಅನೇಕ ಜನಗಳನ್ನು ಪುಡಿಪುಡಿಮಾಡುವಿ; ಮತ್ತು ಅವರ ಲಾಭವನ್ನು ಕರ್ತನಿಗೂ ಅವರ ಸಂಪತ್ತನ್ನು ಸಮಸ್ತ ಭೂಮಿಯ ಕರ್ತನಿಗೂ ಪ್ರತಿಷ್ಠೆ ಮಾಡುವೆನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಚೀಯೋನ್ ನಗರಿಯೇ, ಎದ್ದು ಒಕ್ಕು; ನಾನು ನಿನ್ನ ಕೊಂಬನ್ನು ಕಬ್ಬಿಣವನ್ನಾಗಿಯೂ ನಿನ್ನ ಗೊರಸನ್ನು ತಾಮ್ರವನ್ನಾಗಿಯೂ ಮಾಡುವೆನು; ನೀನು ಬಹು ಜನಾಂಗಗಳನ್ನು ಚೂರುಚೂರಾಗಿ ತುಳಿದುಬಿಡುವಿ; ಅವುಗಳಿಂದ ಹೊಡೆದ ಕೊಳ್ಳೆಯನ್ನು ಕೇವಲ ಯೆಹೋವನದಾಗಿ ಪ್ರತ್ಯೇಕಿಸುವಿ, ಅವುಗಳ ಆಸ್ತಿಯನ್ನು ಲೋಕದ ಕರ್ತನಿಗೆ ಮೀಸಲುಮಾಡುವಿ.
Kannada Bible (KNCL) BSI 2016
ಸರ್ವೇಶ್ವರ ಇಂತೆನ್ನುತ್ತಾರೆ: “ಸಿಯೋನ್ ನಗರಿಯೇ, ಎದ್ದು ಒಕ್ಕಣೆಮಾಡು. ಇದಕ್ಕಾಗಿ ನಿನ್ನ ಕೊಂಬನ್ನು ಕಬ್ಬಿಣವಾಗಿಸುವೆನು. ನಿನ್ನ ಗೊರಸನ್ನು ಕಂಚನ್ನಾಗಿ ಮಾಡುವೆನು. ಅನೇಕ ರಾಷ್ಟ್ರಗಳನ್ನು ನೀನು ತುಳಿದು ಧ್ವಂಸಮಾಡುವೆ. ಅವುಗಳನ್ನು ಕೊಳ್ಳೆಹೊಡೆದು ತಂದ ಸ್ವತ್ತನ್ನು ಸರ್ವೇಶ್ವರಸ್ವಾಮಿಗೆ ಮೀಸಲಾಗಿಡುವೆ. ಅವುಗಳಿಂದ ಬಂದ ಆಸ್ತಿಯನ್ನು ಲೋಕದೊಡೆಯನಿಗೆ ಪ್ರತ್ಯೇಕಿಸಿಡುವೆ.”
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಚೀಯೋನ್ ಪುತ್ರಿಯೇ, ಎದ್ದು ತುಳಿ. ಏಕೆಂದರೆ ನಿನ್ನ ಕೊಂಬನ್ನು ಕಬ್ಬಿಣವಾಗಿಯೂ ನಿನ್ನ ಗೊರಸುಗಳನ್ನು ಕಂಚಿನದಾಗಿಯೂ ಮಾಡುವೆನು. ನೀನು ಅನೇಕ ಜನಾಂಗಗಳನ್ನು ಚೂರುಚೂರಾಗಿ ಮಾಡುವೆ. ಅವರ ಕೊಳ್ಳೆಹೊಡೆದು ಸಂಪಾದಿಸಿದ್ದ ಸ್ವತ್ತನ್ನು ಯೆಹೋವ ದೇವರಿಗೂ ಅವರ ಸಂಪತ್ತನ್ನು ಲೋಕದ ಕರ್ತ ದೇವರಿಗೂ ಪ್ರತಿಷ್ಠೆಮಾಡುವೆನು.